ಅಮೃತ ಭಾರತಿಗೆ ಸಂಗೀತದಾರತಿ: ಯುವ ಸಂಗೀತೋತ್ಸವ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸಂಗೀತ ಭಾರತಿ ಟ್ರಸ್ಟ್ ಕುಂದಾಪುರ, ಚಿರಂತನ ಚಾರಿಟೆಬಲ್ ಟ್ರಸ್ಟ್ ಸುರತ್ಕಲ್ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮ್ಯಾಕ್ಸ್ ಮೀಡಿಯಾ ಉಡುಪಿ, ಭಂಡಾರ್‌ಕಾರ‍್ಸ್ ಕಾಲೇಜು ಇವುಗಳ ಸಹಯೋಗದಲ್ಲಿ ಕುಂದಾಪುರದ ರಂಗ ಅಧ್ಯಯನ ಕೇಂದ್ರದಲ್ಲಿ ರವಿವಾರ “ಅಮೃತಭಾರತಿಗೆ ಸಂಗೀತದಾರತಿ” ಹಿಂದುಸ್ಥಾನಿ ಯುವ ಶಾಸ್ತ್ರಿಯ ಸಂಗೀತೋತ್ಸವ ಕಾರ್ಯಕ್ರಮ ನಡೆಯಿತು.

Call us

Click Here

ಭಂಡಾರ್‌ಕಾರ‍್ಸ್ ಕಾಲೇಜಿನ ಆಡಳಿತ ಮಂಡಳಿಯ ವಿಶ್ವಸ್ಥ ಕೆ. ಶಾಂತಾರಾಮ ಪ್ರಭು ಕಾರ್ಯಕ್ರಮ ಉದ್ಘಾಟಿಸಿ ಸಂಗೀತಕ್ಕೆ ತನ್ನದೇ ಆದ ಮಾಂತ್ರಿಕ ಶಕ್ತಿ ಇದ್ದು, ಇಂತಹ ಸಂಗೀತೋತ್ಸವ ಯುವ ಕಲಾವಿದರಿಗೆ ಉತ್ತಮ ವೇದಿಕೆ. ಇಂತಹ ಕಾರ್ಯಕ್ರಮಗಳು ನಿರಂತರ ನಡೆಯುತ್ತಿರಲಿ ಎಂದರು.

ಸಂಗೀತ ಭಾರತಿ ಟ್ರಸ್ಟ್‌ನ ಅಧ್ಯಕ್ಷ ಕೆ. ಶ್ರೀಧರ್ ಕಾಮತ್, ಕಾರ್ಯದರ್ಶಿ ನಾರಾಯಣ್, ಟ್ರಸ್ಟಿಗಳಾದ ಎ. ಎಸ್. ಎನ್. ಹೆಬ್ಬಾರ್, ಸೀತಾರಾಮ ನಕ್ಕತ್ತಾಯ, ಡಾ| ಎಚ್. ಆರ್. ಹೆಬ್ಬಾರ್, ರೇಖಾ ಕಾರಂತ್, ಸುಪ್ರಸನ್ನ ನಕ್ಕತ್ತಾಯ, ಚಿರಂತನ ಚಾರಿಟೆಬಲ್ ಟ್ರಸ್ಟ್‌ನ ಭಾರವಿ ದೇರಾಜೆ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಬೆಳಗ್ಗಿನಿಂದ ಸಂಜೆಯವರೆಗೆ ಯುವ ಕಲಾವಿದರಿಂದ ಹಿಂದುಸ್ಥಾನಿ ಯುವ ಶಾಸ್ತ್ರಿಯ ಸಂಗೀತೋತ್ಸವ ನಡೆಯಿತು. ಸಂಗೀತ ಭಾರತಿ ಟ್ರಸ್ಟ್‌ನ ಟ್ರಸ್ಟಿ, ಸಂಪಾದಕ ಯು. ಎಸ್. ಶೆಣೈ ಸ್ವಾಗತಿಸಿ, ನಿರೂಪಿಸಿದರು.

Leave a Reply