ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯು ಎಲ್ಲಾ ವೃತ್ತಿಯವರನ್ನು ಪ್ರತಿವರ್ಷ ಗುರುತಿಸಿ ಗೌರವಿಸುತ್ತಿರುವುದರ ಜೊತೆಗೆ ಗ್ರಾಹಕರ ಬೇಡಿಕೆಯಂತೆ ಉತ್ತಮ ಸೇವೆ ನೀಡುತ್ತಿರುವುದು ಶ್ಲಾಘನೀಯ. ಕಳೆದ ೧೦೦ ವರ್ಷಗಳಿಂದ ಪಾರದರ್ಶಕ ಆಡಳಿತ ಮೂಲಕ ಮನೆ ಮಾತಾಗಿರುವ ಸಹಕಾರಿಯು ಉತ್ತಮ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳನ್ನು ಹೊಂದಿ ಜನಪರ ಕಾರ್ಯಕ್ರಮಗಳ ಮೂಲಕ ಉತ್ತಮ ಸೇವೆ ನೀಡುತ್ತಿರುವುದು ಅಭಿನಂದನೀಯ ಎಂದು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಸುಗುಣಾ ಆರ್. ಕೆ. ಹೇಳಿದರು.
ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಗಂಗೊಳ್ಳಿ ಪ್ರಧಾನ ಕಛೇರಿಯ ಬೈಲೂರು ಮಂಜುನಾಥ ಶೆಣೈ ಸಭಾಭವನದಲ್ಲಿ ಜರಗಿದ ಅಭಿನಂದನಾ ಸಮಾರಂಭದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು.
ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎಚ್.ಗಣೇಶ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ವತಿಯಿಂದ ಗಂಗೊಳ್ಳಿ ಅಂಚೆ ಕಛೇರಿಯ ಪೋಸ್ಟ್‌ಮ್ಯಾನ್‌ಗಳಾದ ಶ್ವೇತಾ, ಶಶಿಕಲಾ ಮತ್ತು ಶರಧಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಹಕಾರಿಯ ಉಪಾಧ್ಯಕ್ಷ ಜಿ. ವಿಶ್ವನಾಥ ಆಚಾರ್ಯ, ನಿರ್ದೇಶಕರಾದ ಎನ್.ಮಾಧವ ಕಿಣಿ, ಬಿ.ರಾಘವೇಂದ್ರ ಪೈ, ಜಿ.ವೇದವ್ಯಾಸ ಕೆ.ಆಚಾರ್ಯ, ನಾಗಪ್ರಸಾದ್ ಪೈ ಎಂ.ಜಿ., ಕೆ.ಗೋಪಾಲಕೃಷ್ಣ ನಾಯಕ್, ಜಿ.ವೆಂಕಟೇಶ ನಾಯಕ್, ಕಿರಣ್ ಫಿಲಿಪ್ ಪಿಂಟೋ, ಗೀತಾ ಜಿ.ನಾಯಕ್, ಕಾರ್ಯನಿರ್ವಾಹಕ ಗಣೇಶ್ ನಾಯಕ್, ರೋಟರಿ ಕಾರ್ಯದರ್ಶಿ ಚಂದ್ರಕಲಾ ತಾಂಡೇಲ ಉಪಸ್ಥಿತರಿದ್ದರು.
ನಿರ್ದೇಶಕ ಕೆ.ಪರಮೇಶ್ವರ ನಾಯಕ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.