ಉಡುಪಿ ಜಿಲ್ಲೆಯಾದ್ಯಂತ ಅ.1ರಿಂದ ಆಟೋರಿಕ್ಷಾ ಕನಿಷ್ಠ ದರ 40.ರೂ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಉಡುಪಿ ಜಿಲ್ಲೆಯಲ್ಲಿ ಅಕ್ಟೋಬರ್ 1ರಿಂದ ಅನ್ವಯ ಆಗುವಂತೆ ಆಟೋ ರಿಕ್ಷಾ ಪ್ರಯಾಣ ದರವನ್ನು ಪರಿಷ್ಕರಿಸಿ ಉಡುಪಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆದೇಶಿಸಿದೆ.

Call us

Click Here

ಈ ಪರಿಷ್ಕೃತ ದರದಂತೆ 1.5ಕಿ.ಮೀ.ವರೆಗೆ ಕನಿಷ್ಠ ದರವನ್ನು 40 ರೂ.ಗೆ ಏರಿಸಲಾಗಿದೆ. ನಂತರದ ಪ್ರತಿ ಕಿ.ಮೀ.ಗೆ 20ರೂ. ದರ ನಿಗದಿ ಪಡಿಸಲಾಗಿದ್ದು ಅಟೋರಿಕ್ಷಾ ಚಾಲಕ, ಮಾಲಕರಿಗೂ ಪ್ರಮುಖ ಸೂಚನೆಯನ್ನು ನೀಡಲಾಗಿದೆ.

ಜಿಲ್ಲೆಯ ಎಲ್ಲಾ ಅಟೋರಿಕ್ಷಾ ಚಾಲಕ, ಮಾಲಕರು ತಮ್ಮ ಅಟೋರಿಕ್ಷಾಗಳಿಗೆ ಕಾನೂನಿನ ಪ್ರಕಾರ ಅನುಮತಿ ಇರುವ ಫ್ಲಾಗ್ ಮೀಟರ್ ಕಡ್ಡಾಯವಾಗಿ ಅಳವಡಿಸಿಕೊಂಡು ಪರಿಷ್ಕೃತ ದರಕ್ಕೆ ಅನುಗುಣವಾಗಿ ಕಾನೂನು ಮಾಪನ ಶಾಸ್ತ್ರ ಇಲಾಖೆಯಿಂದ ಸೆ.31ರೊಳಗೆ ಕಡ್ಡಾಯವಾಗಿ ರಿಕ್ಯಾಲೀಬರೇಷನ್ ಹಾಗೂ ಸೀಲ್ ಮಾಡಿಸಿಕೊಳ್ಳುವಂತೆ, ತಪ್ಪಿದರೆ ಕಾನೂನು ಕ್ರಮ ಎದುರಿಸುವಂತೆ ಉಡುಪಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಭಾರ ಕಾರ್ಯದರ್ಶಿ ರವಿಶಂಕರ್ ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply