ದೇಶದಲ್ಲಿ ಪಿ.ಎಫ್.ಐ ನಿಷೇಧಿಸಿದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಅಭಿನಂದನೆ: ಬಿ. ವೈ. ರಾಘವೇಂದ್ರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಈ ದೇಶದ ವಿದ್ವಾಂಸಕ ಕೃತ್ಯಗಳಲ್ಲಿ ಭಾಗಿಯಾಗಿ, ಭಯೋತ್ಪಾದನೆ ದೇಶದ ಭದ್ರತೆ, ಅಂತರಿಕ ಸುರಕ್ಷತ ಹಿನ್ನಲೆಯಲ್ಲಿ PFI ಹಾಗೂ ಅದರ ಅಂಗಸಂಸ್ಥೆಗಳನ್ನು ದೇಶದಲ್ಲಿ 5 ವರ್ಷಗಳ ಅವಧಿಗೆ ನಿಷೇಧಿಸಿ, ಕೇಂದ್ರ ಭಾರತೀಯ ಜನತಾ ಪಕ್ಷದ ಸರ್ಕಾರ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

Call us

Click Here

ರಾಷ್ಟ್ರದಲ್ಲಿ ಭಯೋತ್ಪಾದನಾ ಕೃತ್ಯಗಳನ್ನು ಎಸಿಗುತ್ತಿದ್ದ ಈ ಸಂಘಟನೆಗಳನ್ನು ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ. 2001 ಸೆಪ್ಟೆಂಬರ್ 27ರಂದು SIMI ಸಂಘಟನೆಯನ್ನು ಬ್ಯಾನ್ ಮಾಡಲಾಗಿತ್ತು, 2022 ಸೆಪ್ಟೆಂಬರ್ 27ರಂದು PFI ಸೇರಿದಂತೆ 5 ಮಾಡಲಾಗಿದೆ ಸಂಘಟನೆಗಳನ್ನು ಬ್ಯಾನ್ ಮಾಡಲಾಗಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ & ಪಿಎಫ್ಐ ಅಂಗ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಅಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIC), ನ್ಯಾಷನಲ್ ಕಾನ್ಫಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಕೇರಳ ಇವುಗಳನ್ನು ನಮ್ಮ ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ.

ಬಹುದಿನಗಳ ಬೇಡಿಕೆಯಾಗಿದ್ದ ಈ ಸಂಘಟನಗಳನ್ನು ಬ್ಯಾನ್ ಮಾಡಿರುವುದು ದೇಶದ ಸುರಕ್ಷಾ ದೃಷ್ಟಿಯಿಂದ ಅತ್ಯುತ್ತಮ ಕಾರ್ಯವಾಗಿದೆ. ನಿಖರ ಮಾಹಿತಿ ಮೇರೆಗೆ NIA ಸೇರಿದಂತೆ ವಿವಿಧ ರಾಜ್ಯಗಳ ಪೋಲಿಸ್ ಇಲಾಖೆ, ಇಲಾಖೆ ಗುಪ್ತಚರ ಮತ್ತು ಇತರ ತನಿಖಾ ತಂಡಗಳು ದೇಶದ 15 ರಾಜ್ಯಗಳಲ್ಲಿ ದಾಳಿ ನಡೆಸಿ ಅನೇಕ ಸಾಕ್ಷಿಗಳನ್ನು ಹಾಗೂ ದೊಡ್ಡ ಮಟ್ಟದ ಹಣವನ್ನು ಮತ್ತು ಸಂಘಟನೆಯ ಪ್ರಮುಖರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ನೆಲದ ಕಾನೂನಿಗೆ ವಿರುದ್ಧವಾಗಿರುವ, ದೇಶ ವಿರೋಧಿ ಚಟುವಟಿಕೆ ನಡೆಸುವ ಯಾರನ್ನೂ ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಸಂಸದರು ತಿಳಿಸಿದ್ದಾರೆ.

Click here

Click here

Click here

Click Here

Call us

Call us

Leave a Reply