ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರಧಾನಿ ನರೇಂದ್ರ ಮೋದಿಜಿ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದಲ್ಲಿ ಇತ್ತೀಚಿಗೆ ಕುಂದಾಪುರದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಹರಾದ ವೀಣಾ ಎಸ್ ಶೆಟ್ಟಿ ಅವರು ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ ಭಾರತದ ಪ್ರಧಾನಿ ನರೇಂದ್ರ ಮೋದಿಯವ ಆಶಯದಂತೆ ಸೇವಾ ಪಾಕ್ಷಿಕದ ಅಂಗವಾಗಿ ಅಭಯಹಸ್ತ ಟ್ರಸ್ಟ್ ಕಳೆದ ಒಂದು ವಾರದಿಂದ ಉಡುಪಿ ಜಿಲ್ಲೆಯಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ ಸರಣಿ ರಕ್ತದಾನ ಶಿಬಿರ ಆಯೋಜಿಸಿ ಮೋದಿಜೀಯವರ ಆಶಯವನ್ನು ಈಡೇರಿಸಿರುವುದು ಶ್ಲಾಘನೀಯ ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಓಬಿಸಿ ಮೋರ್ಚಾ ಉಡುಪಿ ಜಿಲ್ಲೆ ಅಧ್ಯಕ್ಹರಾದ ಸುರೇಂದ್ರ ಪಣಿಯೂರು ಮಾತನಾಡಿ ಉಡುಪಿ ಜಿಲ್ಲೆಯಾದ್ಯಂತ ಅಭಯಹಸ್ತ ಟ್ರಸ್ಟ್ ಆಯೋಜಿಸುವ ಎಲ್ಲ ರಕ್ತದಾನ ಶಿಬಿರಕ್ಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದರು.
ಅಧ್ಯಕತೆ ವಹಿಸಿದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸಭಾಪತಿಗಳಾದ ಜಯಕರ್ ಶೆಟ್ಟಿ ಅವರು ಮಾತನಾಡಿ ಯಾವುದೇ ಫಲಾಪೇಕ್ಹೆ ಇಲ್ಲದೆ ಉಡುಪಿ ಜಿಲ್ಲೆಯಾದ್ಯಂತ ರಕ್ತದಾನದ ಪೂರೈಕೆ ಶ್ರಮಿಸುತ್ತಿರುವ ಅಭಯಹಸ್ತ ಟ್ರಸ್ಟ್ ಉಡುಪಿ ಜಿಲ್ಲೆಯ ಮಾದರಿ ಸಂಘಟನೆ ಎಂದರು.
ಈ ಸಂದರ್ಭದಲ್ಲಿ ಡಾ. ಸೋನಿ, ರಕ್ತದ ಆಪತ್ಭಾಂದವ ಸತೀಶ್ ಸಾಲ್ಯಾನ್ ಮಣಿಪಾಲ್, ಅಭಯಹಸ್ತ ಶರತ್ ಕಾಂಚನ್ ಆನಗಳ್ಳಿ, ಅಭಯಹಸ್ತ ಪ್ರಶಾಂತ್ ತಲ್ಲೂರು ಹಾಗೂ ಇತರರು ಉಪಸ್ಥಿತ್ತರಿದ್ದರು. ಮಹೇಂದ್ರ ಉಪ್ಪಿನಕುದ್ರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, ಅರವಿಂದ ಉಪ್ಪಿನಕುದ್ರು ಧನ್ಯವಾದ ಅರ್ಪಿಸಿದರು.