Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶ್ವ ವಿಖ್ಯಾತ ಮರವಂತೆ ಬೀಚ್: ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಅವಗಣನೆ
    ವಿಶೇಷ ವರದಿ

    ವಿಶ್ವ ವಿಖ್ಯಾತ ಮರವಂತೆ ಬೀಚ್: ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಅವಗಣನೆ

    Updated:25/03/20171 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೀಚ್ ಬದಿಯೇ ಲಾರಿಗಳಿಗೆ ಪಾರ್ಕಿಂಗ್ ತಾಣ. ಚತುಷ್ಪಥ ಕಾಮಗಾರಿಯಿಂದ ನಿಸರ್ಗ ಸೌಂದರ್ಯ ಮರೆ. ಪ್ರವಾಸಿಗರಿಗೂ ಇಲ್ಲ ಸೂಕ್ತ ವ್ಯವಸ್ಥೆ.

    Click Here

    Call us

    Click Here

    ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ
    ಕುಂದಾಪುರ: ಸುಂದರ ಸಮುದ್ರದೊಂದಿಗೆ ಪ್ರಾಕೃತಿಕ ಸೌಂದರ್ಯದಿಂದ ಕಂಗೊಳಿಸುತ್ತಿರುವ ಮರವಂತೆ ಕಡಲ ಕಿನಾರೆಯ ಅನುಪಮವಾದ ಸೊಬಗು ದಿನದಿಂದ ದಿನಕ್ಕೆ ಮಾಸುತ್ತಲೇ ಇದೆ. ಮೂಲಭೂತ ಸೌಕರ್ಯಗಳಿಂದ ಸೊರಗುತ್ತಿರುವ ಮರವಂತೆ ಕಡಲತೀರದಲ್ಲಿ ಒಂದೆಡೆ ಸಮುದ್ರಕ್ಕೆ ಅಡ್ಡಲಾಗಿ ಸರತಿ ಸಾಲಿನಲ್ಲಿ ನಿಲ್ಲುವ ಲಾರಿಗಳು ಹಾಗೂ ಪ್ರವಾಸಿಗರ ವಾಹನಗಳ ಸಾಲು; ಇನ್ನೊಂದೆಡೆ ಪ್ರಗತಿಯ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಇಲ್ಲಿ ಪ್ರಾಕೃತಿಕ ಸೌಂದರ್ಯವನ್ನು ಸವಿಯಲು ಬರುವವರಿಗೆ ನಿರಾಸೆ ಮೂಡಿಸುತ್ತಿದೆ. ಇಷ್ಟು ಸಾಲದೆಂಬಂತೆ ಸಮುದ್ರ ಬದಿಯಲ್ಲಿ ನಿಲ್ಲುವ ಮೀನು ಲಾರಿಗಳು ಹೊರಹಾಕುವ ಮಲಿನ ನೀರು ಗಬ್ಬುನಾತ ಬೀರುತ್ತಿದ್ದು, ತೀರದ ಬಳಿ ಒಂದು ಕ್ಷಣವೂ ನಿಲ್ಲಲಾಗದ ಪರಿಸ್ಥಿತಿ ಎದುರಾಗಿದೆ.

    [quote bgcolor=”#ffffff” arrow=”yes” align=”right”]> ತ್ರಾಸಿ-ಮರವಂತೆ ಕಡಲ ಕಿನಾರೆಯ ಅಭಿವೃದ್ಧಿಯೆಂಬುದು ಈಗ ಭ್ರಮನಿರಸನ ಎಂದೆನ್ನಿಸತೊಡಗಿದೆ. ಅಭಿವೃದ್ಧಿಗೆ ಹಣ ಮಂಜುರಾಗುವುದನ್ನು ಎಂದು ಮಾತ್ರ ಕೇಳಿದ್ದೇನೆ. ಆದರೆ ಅದು ಎಷ್ಟು ಸಮರ್ಪಕವಾಗಿ ಬಳಕೆಯಾಗಿದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ. ಪ್ರವಾಸಿ ತಾಣಗಳೆಂದರೇ ಯಾವುದೋ ಊರನ್ನು ಬೊಟ್ಟು ಮಾಡಿ ತೋರಿಸುವ ಬದಲು ನಮ್ಮ ಪ್ರವಾಸಿ ತಾಣವನ್ನು ಅಭಿವೃದ್ಧಿ ಪಡಿಸುವ ಚಿಂತನೆ ನಡೆಸಬೇಕಿದೆ. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಇದರ ಬಗ್ಗೆ ಗಮನ ಹರಿಸಬೇಕಿದೆ. ತ್ರಾಸಿಯಲ್ಲಿನ ಪಾರ್ಕ್ ನಿರ್ವಹಣೆಯನ್ನು ಅಲ್ಲಿನ ಉತ್ಪತ್ತಿಯಿಂದಲೇ ಮಾಡಬಹುದು. ಸ್ಥಳಿಯ ಹಿತಾಸಕ್ತಿಗಳು ಈ ವಿಚಾರದಲ್ಲಿ ಆಸಕ್ತಿ ವಹಿಸಿದರೇ ಅಭಿವೃದ್ಧಿ ಸಾಧ್ಯ. – ಎಸ್. ಜನಾರ್ಧನ ಮರವಂತೆ, ಮಾಜಿ ಅಧ್ಯಕ್ಷರು ಗ್ರಾಮ ಪಂಚಾಯತ್ ಮರವಂತೆ[/quote]

    ಕುಂದಾಪುರ ತಾಲೂಕಿನ ತ್ರಾಸಿ ಹಾಗೂ ಮರವಂತೆ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡು ಸುಮಾರು ಒಂದೂವರೆ ಕಿ.ಮೀ. ದೂರದ ಸಮುದ್ರ ಹಾಗೂ ಅದರ ಇನ್ನೊಂದು ಬದಿಯಲ್ಲಿ ತುಂಬಿ ಸೌಪರ್ಣಿಕಾ ನದಿ ತುಂಬಿ ಹರಿಯುತ್ತದೆ. ಇಂತಹ ರಮ್ಯ ಮನೋಹರ ದೃಶ್ಯವನ್ನು ಬೇರೆಲ್ಲಿಯೂ ಕಾಣಲು ಸಾಧ್ಯವಿಲ್ಲ. ಆ ಕಾರಣದಿಂದಲೇ ಮರವಂತೆ ಬೀಚ್ ವಿಶ್ವ ವಿಖ್ಯಾತಿಯನ್ನು ಪಡೆದಿದೆ. ಆದರೆ ಪ್ರವಾಸೋದ್ಯಮ ಇಲಾಖೆಯ ದಿವ್ಯ ನಿರ್ಲಕ್ಷ್ಯದಿಂದಾಗಿ ಇಲ್ಲಿನ ಅಭಿವೃದ್ಧಿ ಕಾರ್ಯಗಳು ಮಾತ್ರ ನೆನೆಗುದಿಗೆ ಬಿದ್ದಿದೆ. ಅಭಿವೃದ್ಧಿಪಡಿಸುವುದು ಬಿಡಿ, ಇರುವ ಪಾಕೃತಿಕ ಸೌಂದರ್ಯವನ್ನಾದರೂ ಇರುವ ಹಾಗೇ ಸವಿಯಲು ಅನುವು ಮಾಡಿಕೊಡಿ ಎಂದು ಪ್ರವಾಸಿಗರು ಕೇಳುತ್ತಿದ್ದಾರೆ.

    ಸಮುದ್ರಕ್ಕೆ ಅಡ್ಡಲಾಗಿ ನಿಲ್ಲುವ ಲಾರಿಗಳು:
    ತ್ರಾಸಿ-ಮರವಂತೆ ಬೀಚ್ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಸಮುದ್ರಕ್ಕೆ ಅಡ್ಡಲಾಗಿ ಹತ್ತಾರು ಲಾರಿಗಳು ಠಿಕಾಣಿ ಹೂಡುತ್ತವೆ. ದೊಡ್ಡ ಕಂಟೈನರ್‌ಗಳು, ಮೀನು ಸಾಗಾಟ ವಾಹನ ಸೇರಿದಂತೆ ಸಾಲು ಹಿಡಿದು ವಿವಿಧ ವಾಹನಗಳು ನಿಲ್ಲುತ್ತವೆ. ಇದು ಸಮುದ್ರದ ಸೊಬಗನ್ನು ಸವಿಯುವವರಿಗೆ ಅಡ್ಡಿಯನ್ನುಂಟುಮಾಡುತ್ತಿದೆ. ಅಷ್ಟೇ ಅಲ್ಲದೇ ಮೀನು ಲಾರಿಗಳಿಂದ ಹೊರಹಾಕುವ ನೀರು ಅಲ್ಲೇ ನಿಂತು ಗಬ್ಬುನಾತ ಬೀರುತ್ತವೆ. ಇಷ್ಟಕ್ಕೇ ಮುಗಿಯದೇ ಲಾರಿ ನಿಲ್ಲುವ ಪರಿಸರದ ನೈರ್ಮಲ್ಯವೂ ಕೆಡುತ್ತಿದೆ. (ಕುಂದಾಪ್ರ ಡಾಟ್ ಕಾಂ)

    Click here

    Click here

    Click here

    Call us

    Call us

    ಪ್ರವಾಸಿಗರಿಗೆ ಪಾರ್ಕಿಂಗ್, ಮಾಹಿತಿ, ವಸತಿ ಇಲ್ಲ:
    ಸಾಮಾನ್ಯವಾಗಿ ರಾಷ್ಟ್ರೀಯ ಹೆದ್ದಾರಿಯ ಪ್ರಯಾಣಿಕರೇ ಇಲ್ಲಿನ ಬಹುಪಾಲು ಪ್ರವಾಸಿಗರಾದುದರಿಂದ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿಯೇ ವಾಹನವನ್ನು ನಿಲ್ಲಿಸಿ ಸಮುದ್ರ ತೀರಕ್ಕೆ ತೆರಳುತ್ತಾರೆ. ಅವರೂ ಎಲ್ಲೆಂದರಲ್ಲಿ ವಾಹನ ನಿಲ್ಲಿಸುತ್ತಾರೆ. ಮರವಂತೆ ಕಡಲ ಕಿನಾರೆ ಎಷ್ಟು ದೊಡ್ಡದಿದೆ. ಎಲ್ಲಿ ನೀರಿಗೆ ಇಳಿಯಬಹುದು ಇತ್ಯಾದಿ ಮಾಹಿತಿಗಳುಳ್ಳ ಫಲಕವೂ ಇಲ್ಲಿಲ್ಲ. ಸಸೂತ್ರವಾದ ಪಾರ್ಕಿಂಗ್ ವ್ಯವಸ್ಥೆಯೂ ಇಲ್ಲ. ಉಳಿದುಕೊಳ್ಳಲು ಉತ್ತಮ ವಸತಿ ಸೌಕರ್ಯವೂ ಇಲ್ಲ. (ಕುಂದಾಪ್ರ ಡಾಟ್ ಕಾಂ)

    ಚಥುಷ್ಪಥ ಕಾಮಗಾರಿ:
    ಮರವಂತೆಯಲ್ಲಿ ಕುಂದಾಪುರ – ಹೊನ್ನಾವರ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು ರಸ್ತೆ ಅಗಲಿಕರಣ, ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ. ಹೊಳೆ ಸಮುದ್ರವನ್ನು ಒಟ್ಟಿಗೆ ಕಾಣಬಹುದಾದ ನಿಗರ್ಸದತ್ತ ಪರಿಸರಕ್ಕೆ ಇದು ಅಡ್ಡಿ ಉಂಟುಮಾಡಿದೆ. ಚತುಷ್ಪಥದ ರಸ್ತೆಗೆ ಮರವಂತೆಯ ಸೌಪರ್ಣಿಕ ಹೊಳೆಗೆವ ಸೇತುವೆ ನಿರ್ಮಾಣವಾಗುತ್ತಿರುವುದರಿಂದ ನಿಸರ್ಗ ಸೌಂದರ್ಯವನ್ನು ಕಣ್ತುಂಬಿಕೊಳ್ಳುವ ಅವಕಾಶ ಪ್ರವಾಸಿಗರಿಗೆ ತಪ್ಪಿಹೋಗಿದೆ.

    ಅರೆಬರೆ ಅಭಿವೃದ್ಧಿ ಕಾಮಗಾರಿ:
    ಮರವಂತೆ ಬೀಚ್ ಅಭಿವೃದ್ಧಿಗಾಗಿ 2-3 ವರ್ಷದ ಹಿಂದೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆದಿತ್ತು. ಅಂದಿನ ಸಭೆಯಲ್ಲಿ ಅಭಿವೃದ್ಧಿ ಸಮಿತಿ, ಉಪಸಮಿತಿಗಳು ರಚನೆಯಾದವು. ಆದರೆ ಲಾರಿ ನಿಲ್ಲಿಸಬಾರದು, ಗೂಡಂಗಡಿಗಳ ಎತ್ತಂಗಡಿ, ವಾಹನ ಪಾರ್ಕಿಂಗ್ ಸೌಲಭ್ಯ, ತ್ರಾಸಿಯಲ್ಲಿರುವ ಪಾರ್ಕಿನಲ್ಲಿ ಮಕ್ಕಳ ಜಾರುಬಂಡಿ ಇತ್ಯಾದಿ ನಿರ್ಮಾಣಕ್ಕೆ ಯೋಚಿಲಾಯಿತೇ ಹೊರತು ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲ.

    ಅಭಿವೃದ್ಧಿಗಿಲ್ಲ ಕಾಯಕಲ್ಪ:
    ವಿಶ್ವಪ್ರಸಿದ್ಧ ತಾಣವನ್ನು ಹೀಗೆ ಪ್ರವಾಸೋದ್ಯಮ ಇಲಾಖೆ ಕಡೆಗಣಿಸುತ್ತಿರುವುದು ಮಾತ್ರ ವ್ಯವಸ್ಥೆಯ ಲೋಪಕ್ಕೆ ಹಿಡಿದ ಕನ್ನಡಿಯಂತಿದೆ. ಸ್ಥಳಿಯರ ಅಸಕಾರವೂ ಇದರಲ್ಲಿ ಎದ್ದು ಕಾಣುತ್ತಿದೆ. ತ್ರಾಸಿ ಪಾರ್ಕ್ ಅಭಿವೃದ್ಧಿ, ಬೀಚ್ ಬಳಿ ಕುಳಿತುಕೊಳ್ಳಲು ವ್ಯವಸ್ಥಿತವಾದ ಕಲ್ಲಿನ ಬೆಂಚು, ವಿದ್ಯುತ್ ದೀಪ್, ಕುಡಿಯುವ ನೀರಿನ ವ್ಯವಸ್ಥೆ, ವ್ಯವಸ್ಥಿತ ಶೌಚಾಲಯ, ಪಾರ್ಕಿಂಗ್ ಸೌಲಭ್ಯ, ಪಾರ್ಕಿಂಗ್ ಇರುವಲ್ಲಿಯೇ ಅಂಗಡಿ ಕೋಣೆ, ಮಾಹಿತಿದಾರರು ಸೇರಿದಂತೆ ಅಲ್ಲಿ ಮೂಲಭೂತ ಸೌಕರ್ಯಗಳನನ್ನು ಒದಗಿಸಿಕೊಟ್ಟರೇ, ಪ್ರವಾಸಿಗರ ಸಂಖ್ಯೆಯೂ ಹೆಚ್ಚತ್ತದೆ. ಆದಾಯವೂ ಹೆಚ್ಚುತ್ತದೆ ಎಂಬುದು ಊರಿನ ಕೆಲವರ ಅಂಬೋಣ.

    _MG_1162 _MG_1172 _MG_1173 _MG_1176 _MG_1182 _MG_1197 _MG_1288 _MG_1291 _MG_1295 _MG_1334 _MG_1336 _MG_1344 _MG_1346

    Like this:

    Like Loading...

    Related

    Kundapura Tourism places maravanthe ಮರವಂತೆ
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಅರಣ್ಯ ಲೋಕದ ಮರುಸೃಷ್ಟಿ – ಕುಮ್ರಿಕಾನ್. ‌ಬೈಂದೂರು ಉತ್ಸವದ ವಿಶೇಷ ಆಕರ್ಷಣೆ

    01/11/2024

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    1 Comment

    1. Radhakrishna Shetty on 09/10/2015 2:43 pm

      ಇತ್ತೀಚಿಗೆ ಊರಿಗೆ ಬಂದಾಗ ನಾನೂ ಇದನ್ನ ಕಣ್ಣಾರೆ ಕಂಡಿದ್ದೆ, ವರದಿಯು ೧೦೦ ಕ್ಕೆ ೧೦೦ ಸತ್ಯ. ಊರಿನವರೂ, ಜನ ಪ್ರತಿನಿಧಿಗಳೂ, ರಾಜಕೀಯ ಮುಖಂಡರೂ, NGO ಗಳೂ ಇತ್ತ ಗಮನ ಹರಿಸಿ, ನಮ್ಮ ಈ ಸುಂದರ ಪ್ರಾಕ್ರತಿಕ ಸೌಂದರ್ಯ ವನ್ನು ಉಳಿಸಿಕೊಳ್ಳೋಣ

      Reply

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d