ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಜಿಎಸ್‌ಬಿ ಸಮಾಜದ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬಾರದು ಹಾಗೂ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಶ್ರೀ ಸರಸ್ವತಿ ವಿದ್ಯಾನಿಧಿ ವತಿಯಿಂದ ವಿದ್ಯಾರ್ಥಿವೇತನ ನೀಡುತ್ತಿರುವುದು ಸ್ತುತ್ಯಾರ್ಹವಾದುದು. ವಿದ್ಯಾರ್ಥಿವೇತನವನ್ನು ವಿದ್ಯಾಭ್ಯಾಸದ ಉದ್ದೇಶಕ್ಕಾಗಿ ಬಳಸಿಕೊಂಡು, ವಿದ್ಯಾಭ್ಯಾಸ ಮುಗಿಸಿ ಉನ್ನತ ಸ್ಥಾನಮಾನ ಪಡೆದುಕೊಂಡ ಬಳಿಕ ವಿದ್ಯಾರ್ಥಿವೇತನ ಪಡೆದುಕೊಂಡ ಸಂಸ್ಥೆಗೆ ಸಹಾಯ ಮಾಡುವ ಪ್ರವೃತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ನಗರ ಕೃಷ್ಣಾನಂದ ಸುಬ್ರಾಯ ನಾಯಕ್ ಹೇಳಿದರು.

Call us

Click Here

ಗಂಗೊಳ್ಳಿಯ ಶ್ರೀ ಸರಸ್ವತಿ ವಿದ್ಯಾನಿಧಿ ಆಶ್ರಯದಲ್ಲಿ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಜರಗಿದ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀ ಸರಸ್ವತಿ ವಿದ್ಯಾನಿಧಿ ಅಧ್ಯಕ್ಷ ರವೀಂದ್ರ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಯೋಧ ಟಿ.ದಿನಕರ ಶೆಣೈ ಶುಭಾಶಂಸನೆಗೈದರು. ಇದೇ ಸಂದರ್ಭ ಕಳೆದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಜಿಎಸ್‌ಬಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಜಿಎಸ್‌ಬಿ ಸಮಾಜದ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸುಮಾರು ೧.೧೦ ಲಕ್ಷ ರೂ. ವಿದ್ಯಾರ್ಥಿವೇತನ ವಿತರಿಸಲಾಯಿತು.

ವಿದ್ಯಾನಿಧಿ ಕಾರ್ಯದರ್ಶಿ ಕೆ.ರಾಮನಾಥ ನಾಯಕ್ ಸ್ವಾಗತಿಸಿದರು. ವಿದ್ಯಾನಿಧಿ ಸ್ಥಾಪಕ ಸದಸ್ಯ ಎಚ್.ಗಣೇಶ ಕಾಮತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್.ಅಶ್ವಿನ್ ನಾಯಕ್, ಕೆ.ಗೋಪಾಲಕೃಷ್ಣ ನಾಯಕ್ ಮತ್ತು ಎಂ.ನಾಗೇಂದ್ರ ಪೈ ಅತಿಥಿಗಳನ್ನು ಗೌರವಿಸಿದರು. ಬಿ. ರಾಘವೇಂದ್ರ ಪೈ ಕಾರ್ಯಕ್ರಮ ನಿರ್ವಹಿಸಿದರು.

Leave a Reply