ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ/ಬೈಂದೂರು: ಯುಎಇನಲ್ಲಿ ನಡೆದ ಅಂತರಾಷ್ಟ್ರೀಯ ಕಿವುಡರ ಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಡಿಐಸಿಸಿ ಟಿ-20 ಚಾಂಪಿಯನ್ ಟ್ರೋಫಿ 2022 ವಿಜೇತ ಭಾರತ ಕಿವುಡರ ಕ್ರಿಕೆಟ್ ತಂಡದ ಸದಸ್ಯ, ಕರ್ನಾಟಕದಿಂದ ಆಯ್ಕೆಯಾದ ಏಕಮಾತ್ರ ಆಟಗಾರ ಪ್ರಥ್ವಿರಾಜ್ ಶೆಟ್ಟಿ ಅವರು ಭಾನುವಾರ ಹುಟ್ಟೂರಿಗೆ ಮರಳುವ ವೇಳೆ ಕುಂದಾಪುರ ಹಾಗೂ ಬೈಂದೂರಿನಲ್ಲಿ ಅದ್ದೂರಿಯಾಗಿ ಸ್ವಾಗತಿಸಿಕೊಳ್ಳಲಾಯಿತು.
ಕುಂದಾಪುರದಿಂದ ಗೋಳಿಹೊಳೆ ತನಕ ಬೈಂದೂರು ಮಾರ್ಗವಾಗಿ ಪ್ರಥ್ವಿರಾಜ ಶೆಟ್ಟಿ ಅವರನ್ನು ಪುರಮೆರವಣಿಗೆ ಮೂಲಕ ಕರೆತಂದು ಬಳಿಕ ಕುಂದಾಪುರದಲ್ಲಿ ಯುವ ಬಂಟರ ಸಂಘ ಹಾಗೂ ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್, ಬೈಂದೂರಿನಲ್ಲಿ ಬಂಟರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಗೌರವಿಸಿದವು.
ಕುಂದಾಪುರದದ ಆರ್.ಎನ್. ಶೆಟ್ಟಿ ಮಿನಿ ಹಾಲ್’ನಲ್ಲಿ ಜರುಗಿದ ಸನ್ಮಾನ ಕಾರ್ಯಕ್ರಮದಲ್ಲಿ ಯುವ ಬಂಟರ ಸಂಘದ ಅಧ್ಯಕ್ಷ ಡಾ. ಅಂಪಾರು ನಿತ್ಯಾನಂದ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ಸುಕೇಶ್ ಶೆಟ್ಟಿ ಹೊಸ್ಮಠ, ಸುನಿಲ್ ಶೆಟ್ಟಿ ಹೆರಿಕುದ್ರು, ಪದಾಧಿಕಾರಿಗಳಾದ ಸಚಿನ್ ಶೆಟ್ಟಿ ಹುಂಚನಿ, ರವಿಶಂಕರ ಹೆಗ್ಡೆ ಸಬ್ಬಾಡಿ, ನಿತಿನ್ ಶೆಟ್ಟಿ ಹುಂಚನಿ, ದಿನಕರ ಶೆಟ್ಟಿ ಹರ್ಕಾಡಿ, ಸಚಿನ್ ಶೆಟ್ಟಿ ವಕ್ವಾಡಿ, ಅರುಣ್ ಶೆಟ್ಟಿ ಕುಂದಾಪುರ, ಅಕ್ಷಯ ಹೆಗ್ಡೆ ಮೊಳಹಳ್ಳಿ ಮೊದಲಾದವರು ಉಪಸ್ಥಿತರಿದ್ದರು.
ಬೈಂದೂರು ಬಂಟರ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬೈಂದೂರು ಬಂಟರ ಸಂಘದ ಅಧ್ಯಕ್ಷ ಎನ್. ಜಗನ್ನಾಥ ಶೆಟ್ಟಿ, ಬೈಂದೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಟಿ. ನಾರಾಯಣ ಹೆಗ್ಡೆ, ನಿವೃತ್ತ ಮುಖ್ಯೋಪಧ್ಯಾಯರಾದ ಕೃಷ್ಣಪ್ಪ ಶೆಟ್ಟಿ, ಉಪಾಧ್ಯಕ್ಷರುಗಳಾದ ಗೋಕುಲ ಶೆಟ್ಟಿ ಉಪ್ಪುಂದ, ವಸಂತ ಹೆಗ್ಡೆ, ಕಾರ್ಯಕಾರಿ ಸಮಿತಿ ನಿರ್ದೇಶಕರುಗಳಾದ ವಾದಿರಾಜ ಶೆಟ್ಟಿ, ಕುಶಲ್ ಶೆಟ್ಟಿ, ಬೈಂದೂರು ಯುವ ಬಂಟರ ವೇದಿಕೆ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು. ಶಿಕ್ಷಕ ಕರುಣಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
























