ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಳವು ಪ್ರಕರಣ ಆರೋಪಿ ಜೈಲಿಗೆ ಕರೆದೊಯ್ಯುವಾಗ ಪೊಲೀಸರಿಂದ ಎಸ್ಕೇಪ್ ಆದ ಘಟನೆ ನಡೆದಿದೆ. ಮೊಬೈಲ್ ಅಂಗಡಿಯಲ್ಲಿ ಕಳವು ಮಾಡಿದ ಮೊಹಮ್ಮದ್ ರಾಹಿಕ್ (22) ಎಂಬಾತನನ್ನು ಕರೆದೊಯ್ಯುವಾಗ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.
ಆರೋಪಿಯನ್ನು ಕುಂದಾಪುರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದರಿಂದ ಹಿರಿಯಡ್ಕ ಸಬ್ ಜೈಲಿಗೆ ಕರೆದೊಯ್ಯುವಾಗ ಜೈಲ್ ಸಮೀಪವೇ ಆರೋಪಿ ತಪ್ಪಿಸಿಕೊಂಡಿದ್ದಾನೆ.
ಕೆಲ ತಿಂಗಳ ಹಿಂದೆ ಬೀಜಾಡಿ ಸಮೀಪದಲ್ಲಿ ಮೊಬೈಲ್ ಅಂಗಡಿ ಕಳವು ಪ್ರಕರದಲ್ಲಿ ರಾಹೀಕ್ ಎಂಬಾತನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದರು. ತಪ್ಪಿಸಿಕೊಂಡ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.