ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವಕ್ಕೆ ಪರಿಕಲ್ಪನೆಯೊಂದಿಗೆ ಕನಸನ್ನು ಕಂಡವರು ಡಾ ಬಾಬಾಸಾಹೇಬ್ ಅಂಬೇಡ್ಕರ್ ರವರು. ಮೀಸಲಾತಿ ಮಾತ್ರವಲ್ಲದೆ ಅನೇಕ ಸೌಲಭ್ಯಗಳಿಗೆ ಕಾರಣಿಭೂತವಾದ ಕಾನೂನುಗಳು ಜಾರಿಯಾಗಲು ಕಾರಣ ಮತ್ತು ಅದರ ಹಿನ್ನೆಲೆಗಳು ಆರ್ಥಿಕ ಅಭಿವೃದ್ಧಿ ನೀರಾವರಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಬದುಕಿನ ಸಕಾರಾತ್ಮಕ ಬದಲಾವಣೆಗಳಿಗೆ ಅಂಬೇಡ್ಕರ್ ರವರು ಶ್ರಮಿಸಿದ ಬಗೆಯನ್ನು ದೃಷ್ಟಾಂತಗಳ ಮೂಲಕ ಸಾಮಾಜಿಕ ಚಿಂತಕರಾದ ನಾರಾಯಣ ಮಣೂರು ಅವರು ವಿವರಿಸಿದರು
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಬೈಂದೂರು ತಾಲ್ಲೂಕು ಘಟಕ ಸಹಯೋಗದೊಂದಿಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರಿನಲ್ಲಿ ನಡೆದ “ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು” ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಬೈಂದೂರು ಘಟಕದ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಡಾ. ರಘು ನಾಯ್ಕ್ರರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷೀಯ ನುಡಿಗಳನ್ನು ಆಡಿದರು
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು ಪ್ರಾಸ್ತಾವಿಕ ನುಡಿಗಳೊಂದಿಗೆ ಗಣ್ಯರನ್ನು ಸ್ವಾಗತಿಸಿದರು
ಕಾರ್ಯಕ್ರಮದ ಅಂಗವಾಗಿ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಸಿಂಚನಾ ಪ್ರಥಮ ಬಿಎ ಪ್ರಥಮ ಸ್ಥಾನ, ಅಶ್ವಿನಿ ಪ್ರಥಮ ಬಿಎ ದ್ವಿತೀಯ ಸ್ಥಾನ, ಹಾಗೂ ರೂಪಾ ಆರ್ ನಾಯ್ಕ್ ಪ್ರಥಮ ಬಿಎ ತೃತೀಯ ಸ್ಥಾನ ಹಾಗೂ ಭಾಷಣ ಸ್ಪರ್ಧೆಯಲ್ಲಿ ಸುಹರ್ಷಿಣಿ ಪ್ರಥಮ ಬಿಎ ಪ್ರಥಮ ಸ್ಥಾನ, ಅಕ್ಷತಾ ಪ್ರಥಮ ಬಿಎ ದ್ವಿತೀಯ ಸ್ಥಾನ ಮತ್ತು ಮಲ್ಲಿಕಾ ಪ್ರಥಮ ಬಿಬಿಎ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪುಸ್ತಕ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು ಹಾಗೂ ನಾಡಗೀತೆಯನ್ನು ಹಾಡಲಾಯಿತು
ಕಾರ್ಯಕ್ರಮದ ಸಂಚಾಲಕರಾದ ಡಾ. ಸಣ್ಣಚಿಕ್ಕಯ್ಯ ಮತ್ತು ಕನ್ನಡ ವಿಭಾಗ ಮುಖ್ಯಸ್ಥರಾದ ನಾಗರಾಜ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ಸಹಾಯಕ ಪ್ರಾಧ್ಯಾಪಕರಾದ ನವೀನ್ ಎಚ್ ಜೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು