ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಅ.28: ಮನೆಯಲ್ಲಿ ಓದುತ್ತಿದ್ದ 14 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ತಾಲೂಕಿನ ತಲ್ಲೂರಿನಲ್ಲಿ ನಡೆದಿದೆ. ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಅನುಶ್ರೀ, ಹೃದಯಾಘಾತಕ್ಕೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಬಾಲಕಿ.
ಗುರುವಾರ ಬೆಳಿಗ್ಗೆ ಮನೆಯ ಮೊದಲ ಮಹಡಿಯಲ್ಲಿ ಓದುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡ ಅನುಶ್ರೀ, ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಕೊನೆಯುಸಿರೆಳೆದಿದ್ದಳು. ಅನುಶ್ರೀಯ ಮೃತದೇಹದ ಮರಣೋತ್ತರ ಪರೀಕ್ಷೆ ಮಣಿಪಾಲ ಆಸ್ಪತ್ರೆಯಲ್ಲಿ ನಡೆದಿದ್ದು, ಮರಣೋತ್ತರ ವರದಿ ಇನ್ನಷ್ಟೇ ದೊರೆಯಬೇಕಿದೆ. ಗುರುವಾರ ರಾತ್ರಿ ಬಾಲಕಿಯ ಅಂತ್ಯಕ್ರಿಯೆ ನಡೆಸಲಾಗಿದೆ. ಈ ಮೊದಲು ಆಕೆಯ ಕಣ್ಣುಗಳನ್ನು ದಾನ ಮಾಡಲಾಗಿದೆ.
ಮೃತ ಅನುಶ್ರೀಯು ಕುಂದಾಪುರದ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮತ್ತು ಹಕ್ಲಾಡಿ ಪೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿಯಾಗಿದ್ದಾಳೆ.