ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು, ಸ.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ, ಗ್ರಾಮ ಪಂಚಾಯತ್ ಗಂಗೊಳ್ಳಿ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಸಹಯೋಗದೊಂದಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ವಠಾರದಲ್ಲಿ ಶುಕ್ರವಾರ ನಡೆಯಿತು.
ಗಂಗೊಳ್ಳಿ ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಮತ್ತು ಕಾರ್ಯದರ್ಶಿ ಎಚ್.ಗಣೇಶ ಕಾಮತ್ ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಸುಗುಣಾ ಆರ್.ಕೆ., ಶಾಲೆಯ ಆಡಳಿತ ಮಂಡಳಿ ಸದಸ್ಯ ಕೆ.ರಾಮನಾಥ ನಾಯಕ್, ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ., ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಸಂಜೀವಿನಿ ಸಂಘದ ಒಕ್ಕೂಟದ ಪದಾಧಿಕಾರಿಗಳು, ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಉಪನ್ಯಾಸಕರು, ಸಹಶಿಕ್ಷಕರು, ಶಾಲೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು, ಪ್ರೌಢಶಾಲಾ ವಿದ್ಯಾರ್ಥಿಗಳು, ಸ.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಉಪನ್ಯಾಸಕರು, ಸಹಶಿಕ್ಷಕರು, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರು, ರೋಟರಿ ಕ್ಲಬ್ ಗಂಗೊಳ್ಳಿ ಸದಸ್ಯರು ಹಾಗೂ ಸಂಜೀವಿನಿ ಸಂಘದ ಸದಸ್ಯರು ಮತ್ತು ಕಾಲೇಜಿನ ಸಿಬ್ಬಂದಿಗಳು ’ಜಯ ಭಾರತ ಜನನಿಯ ತನುಜಾತೆ’, ’ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’, ’ಬಾರಿಸು ಕನ್ನಡ ಡಿಂಡಿಮವ’॒, ’ಹಚ್ಚೇವು ಕನ್ನಡದ ದೀಪ’॒, ’ವಿಶ್ವವಿನೂತನ ವಿದ್ಯಾಚೇತನ.॒’, ’ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’॒ ಕನ್ನಡ ಗೀತೆಗಳನ್ನು ಏಕಕಂಠದಲ್ಲಿ ಸಾಮೂಹಿಕವಾಗಿ ಸುಶ್ರಾವ್ಯವಾಗಿ ಹಾಡಿದರು. ಉಪನ್ಯಾಸಕ ಥೋಮಸ್ ಪಿ.ಎ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.
ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಉಮೇಶ ಕರ್ಣಿಕ್ ಸ್ವಾಗತಿಸಿದರು. ಉಪನ್ಯಾಸಕ ಸುಜಯೀಂದ್ರ ಹಂದೆ ಕಾರ್ಯಕ್ರಮ ನಿರ್ವಹಿಸಿದರು. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ವಂದಿಸಿದರು.