ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ, ಸುಬ್ರಹ್ಮಣ್ಯ ಧಾರೇಶ್ವರ ಸೇರಿದಂತೆ ಜಿಲ್ಲೆಯ ಐವರಿಗೆ ರಾಜ್ಯೋತ್ಸವ ಪ್ರಶಸ್ತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
67ನೇ ಕನ್ನಡ ರಾಜ್ಯೋತ್ಸವದಂದು ವಿವಿಧ ಕ್ಷೇತ್ರದ ಸಾಧಕರಿಗೆ ನೀಡಲಾಗುವ ಪ್ರಶಸ್ತಿಗೆ 67 ಮಂದಿ ಸಾಧಕರು ಹಾಗೂ 10 ಸಂಘ ಸಂಸ್ಥೆಗಳನ್ನು ಸರಕಾರ ಗುರುತಿಸಿದೆ.

Call us

Click Here

ಸಾಮಾನ್ಯರಾಗಿದ್ದುಕೊಂಡು ಅಸಮಾನ್ಯ ಕೆಲಸ ಮಾಡಿದ ನಾಡಿದ ಸಾಧಕರನ್ನು ಹಾಗೂ ಸಂಘ ಸಂಸ್ಥೆಗಳನ್ನು ಸರಕಾರ ಗುರುತಿಸಿರುವುದು ವಿಶೇಷವಾಗಿದೆ. ಸರಕಾರವೇ ಗುರುತಿಸಿ ಪ್ರಶಸ್ತಿ ನೀಡುವ ಪ್ರಕ್ರಿಯೆ ಈ ವರ್ಷದಿಂದ ಆರಂಭಗೊಂಡಿದ್ದರೂ ಸಾಕಷ್ಟು ಅರ್ಜಿಗಳು ಬಂದಿದ್ದರಿಂದ, ಆಯ್ಕೆ ಸಮಿತಿ ಎರಡನ್ನೂ ಸಮಾನವಾಗಿ ಪರಿಗಣಿಸಿ ಆಯ್ಕೆ ಮಾಡಿದೆ.

ಕುಂದಾಪುರದ ತಾಲೂಕಿನ ಸಮಾಜ ಸೇವಕ ಹಾಗೂ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ, ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣರ, ಯಕ್ಷಗಾನ ತಾಳಮದ್ದಳೆ ಅರ್ಥಧಾರಿ ಡಾ. ಎಂ. ಪ್ರಭಾಕರ ಜೋಶಿ, ಯಕ್ಷಗಾನ ಸ್ತ್ರೀ ಪಾತ್ರಧಾರಿ ಎಂ.ಎ ನಾಯ್ಕ್ ಸೇರಿದಂತೆ ವಿವಿಧ ಸಾಧಕರಿಗೆ ಪ್ರಶಸ್ತಿ ಒಲಿದು ಬಂದಿದೆ.

ಇಸ್ರೋ ಮಾಜಿ ನಿರ್ದೇಶಕ ಶಿವನ್‌, ಹಿರಿಯ ಸಾಹಿತಿ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲೀಷ್‌ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್‌, ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌, ಸೋಲಿಗ ಸಮುದಾಯದಲ್ಲಿ ಸಹಕಾರದ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ವನಸಂರಕ್ಷಣೆಗಾಗಿ ಜೀವನವನ್ನೇ ಮುಡುಪಾಗಿಟ್ಟ ರಾಮನಗರದ ಸಾಲುಮರದ ನಿಂಗಣ್ಣ, ಹಿರಿಯ ಚಲನಚಿತ್ರನಟರಾದ ದತ್ತಣ್ಣ, ಅವಿನಾಶ್‌, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ : ಯಕ್ಷಗಾನ ತಾಳಮದ್ದಳೆ ಕ್ಷೇತ್ರದ ಪ್ರಸಿದ್ಧ ಅರ್ಥಧಾರಿ ಡಾ. ಎಂ.ಪ್ರಭಾಕರ ಜೋಷಿ, ಬಡಗುತಿಟ್ಟಿನ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ತೆಂಕು ತಿಟ್ಟಿನ ಹಿರಿಯ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ, ಬಡಗುತಿಟ್ಟಿನ ಪ್ರಸಿದ್ಧ ಸ್ತ್ರೀ ಪಾತ್ರಧಾರಿ ಎಂ. ಎ. ನಾಯ್ಕ್ ಅವರಿಗೆ ಪ್ರಶಸ್ತಿ ಒಲಿದು ಬಂದಿದೆ.

ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್‌ ಸೇರಿದಂತೆ 67 ಜನರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Click here

Click here

Click here

Click Here

Call us

Call us

ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಜಾತಿ, ಪ್ರಾದೇಶಿಕ ನ್ಯಾಯ ಸೇರಿದಂತೆ ಎಲ್ಲ ಆಯಾಮಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹತ್ತು ಸಮಾಜ ಸೇವಾ ಸಂಘಟನೆಗಳನ್ನು ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಮೈಸೂರಿನ ರಾಮಕೃಷ್ಣ ಆಶ್ರಮ, ಬೆಂಗಳೂರಿನ ಅಮೃತ ಶಿಶು ನಿವಾಸ, ಸುಮನಾ ಪೌಂಡೇಶನ್‌, ಹಾವೇರಿಯ ಅಗಡಿ ಫಾರ್ಮ್ಸ್‌ , ಗದಗ ಜಿಲ್ಲೆಯ ಲಿಂಗಾಯತ ಪ್ರಗತಿಶೀಲ ಸಂಸ್ಥೆ ಸೇರಿದಂತೆ ಹತ್ತು ಸಾಮಾಜಿಕ ಸಂಘಟನೆಯನ್ನು ಆಯ್ಕೆ ಮಾಡಲಾಗಿದೆ.

ಪುನೀತ್ ರಾಜಕುಮಾರ್​ಗೆ ಕರ್ನಾಟಕ ರತ್ನ
ಸ್ಯಾಂಡಲ್​ವುಡ್​ ನಟ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕನ್ನಡ ರಾಜ್ಯೋತ್ಸವ ದಿನದಂದು ಪ್ರದಾನ ಮಾಡುವುದಾಗಿ ಹಿಂದೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಕಾರ್ಯಕ್ರಮಕ್ಕೆ ಜೂನಿಯರ್ ಎನ್‍ಟಿಆರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಅಲ್ಲದೇ ಸೂಪರ್ ಸ್ಟಾರ್ ರಜನಿಕಾಂತ್ ಸಹ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಇದನ್ನೂ ಓದಿ:
► ನಾಗರಾಜ ಪಾಣ, ಕನರಾಡಿ, ಹಂದಾಡಿ, ಗುಲ್ವಾಡಿ ಸೇರಿದಂತೆ 36 ಮಂದಿಗೆ ಜಿಲ್ಲಾ ರಾಜ್ಯೋತ್ಸವ – https://kundapraa.com/?p=62946 .

Leave a Reply