ಶಿಕ್ಷಕ ಸದಾನಂದ ಬೈಂದೂರು ಅವರಿಗೆ ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪದವಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬೀಜಾಡಿ ಸರ್ಕಾರಿ ಪ್ರೌಢಶಾಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರಾಗಿರುವ ಸದಾನಂದ ಬೈಂದೂರು ಅವರಿಗೆ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರ ವಿಭಾಗದ ಅನ್ವಯಿಕ ಜಾನಪದ ನಿಕಾಯದಡಿಯಲ್ಲಿ ಪಿಎಚ್‌ಡಿ ಪದವಿ ದೊರೆತಿದೆ.

Call us

Click Here

ಅವರು ಮಂಡಿಸಿದ “ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ, 2009 ಮತ್ತು ಸಾಮಾಜಿಕ ನ್ಯಾಯ: ಉಡುಪಿ ಜಿಲ್ಲೆಯನ್ನು ಅನುಲಕ್ಷಿಸಿ” ಕುರಿತ ಸಂಶೋಧನಾ ಮಹಾಪ್ರಬಂಧಕ್ಕಾಗಿ ಅವರಿಗೆ ಪಿಎಚ್‌ಡಿ ದೊರೆತಿದೆ. ಸದಾನಂದ ಅವರು ರಾಜ್ಯಶಾಸ್ತ್ರ, ಇತಿಹಾಸ, ಕನ್ನಡ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಮೈಸೂರು ಹಾಗೂ ಧಾರವಾಡ ವಿಶ್ವವಿದ್ಯಾನಿಲಯಗಳಲ್ಲಿ ಪಡೆದಿದ್ದಾರೆ. ನೀನಾಸಮ್ ರಂಗಶಿಕ್ಷಣ ಡಿಪ್ಲೊಮಾವನ್ನು ಪಡೆದಿದ್ದಾರೆ. 17 ವರ್ಷ ಪ್ರಾಥಮಿಕ ಶಾಲಾ ಶಿಕ್ಷಕರಾಗಿ, 10 ವರ್ಷ ಪ್ರೌಢಶಾಲಾ ಶಿಕ್ಷಕರಾಗಿ ಹಾಗೂ 5 ವರ್ಷ ಕುಂದಾಪುರ ಕ್ಷೇತ್ರ ಸಂಪನ್ಮೂಲ ಕೇಂದ್ರದ ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ನಿವೃತ್ತ ಪ್ರಾಂಶುಪಾಲರು ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದ ಡಾ. ಎಂ ದಿನೇಶ ಹೆಗ್ಡೆ ಇವರ ಮಾರ್ಗದರ್ಶನದಲ್ಲಿ ಸದಾನಂದ ಅವರು ಅಧ್ಯಯನ ಮಾಡಿದ್ದಾರೆ. ಅವರು ವೆಂಕಮ್ಮ ಹಾಗೂ ಗೋವಿಂದ ನಾಯ್ಕ್ ಅವರ ನಾಲ್ಕನೇ ಪುತ್ರರಾಗಿದ್ದಾರೆ.

Leave a Reply