Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೊಳಪು 2022: ಕ್ರೀಡಾಕೂಟದ ಲಾಂಛನ ಅನಾವರಣ
    ಊರ್ಮನೆ ಸಮಾಚಾರ

    ಹೊಳಪು 2022: ಕ್ರೀಡಾಕೂಟದ ಲಾಂಛನ ಅನಾವರಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ:
    ಕೋಟತಟ್ಟು ಗ್ರಾಮ ಪಂಚಾಯತ್, ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ ಸಹಯೋಗದಲ್ಲಿ ನಡೆಯುವ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಜನಪ್ರತಿನಿಧಿಗಳ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಹೊಳಪು-2022 (ಜನಾಧಿಕಾರದ ಸಂಚಲನ) ಕಾರ್ಯಕ್ರಮದ ಲಾಂಛನ ಅನಾವರಣವನ್ನು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ ಅವರು ಅನಾವರಣಗೊಳಿಸಿದರು.

    Click Here

    Call us

    Click Here

    ಕಾರ್ಯಕ್ರಮದ ಲಾಂಛನ ಅನಾವರಣಗೊಳಿಸಿ ಮಾತನಾಡಿದ ಕಿರಣ್ ಕೊಡ್ಗಿಯವರು ಜನಪ್ರತಿನಿಧಿಗಳು ದಿನ ನಿತ್ಯ ರಾಜಕೀಯ-ಸರಕಾರಿ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಒತ್ತಾಡದಿಂದ ಇರುತ್ತಾರೆ ಅವರು ಸಂಭ್ರಮದಿಂದ ಭಾಗವಹಿಸಲು ಇದೊಂದು ವೇದಿಕೆ, ಇಂತಹ ಕ್ರೀಡಾ ಕೂಟಗಳು ಪಂಚಾಯತ್ರಾಜ್ ವ್ಯವಸ್ಥೆಯ ವಿಕೇಂದ್ರಿಕರಣಕ್ಕೆ ಒಂದು ಹೆಜ್ಜೆಯಾಗಲಿದೆ ಎಂದರು.

    ಕಾರಂತ ಪ್ರತಿಷ್ಠಾನ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಮಾತನಾಡಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಇನ್ನಷ್ಟೂ ಗಟ್ಟಿಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದ್ದು ಪಕ್ಷ ಭೇದ ಮರೆತು ಉಡುಪಿ-ದಕ್ಷಿಣ ಕನ್ನಡದ 6000 ಕ್ಕೂ ಮಿಕ್ಕಿ ಜನಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮ ನವೆಂಬರ್ 26 ರಂದು ಕೋಟದ ವಿವೇಕ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

    ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯ ರಾಜು ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕಾರಂತ ಪ್ರತಿಷ್ಠಾನದ ಸದಸ್ಯರು, ಪಂಚಾಯತ್ ಅಧಿಕಾರಿ ವರ್ಗ, ಥೀಮ್ ಪಾರ್ಕ್, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೆಂದ್ರ ಕುಮಾರ್ ನಿರೂಪಿಸಿ, ಸಮಾಜ ಕಲ್ಯಾಣ ಇಲಾಖೆಯ ಆಪ್ತ ಸಹಾಯಕ ಹರೀಶ್ ಕುಮಾರ್ ಶೆಟ್ಟಿ ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    fifteen + fourteen =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.