ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ,ವಕೀಲರ ಸಂಘ (ರಿ) ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ, ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರಿಕರ ಸಬಲೀಕರಣ ಈ ಕುರಿತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

Call us

Click Here

ಸಮಾರಂಭವನ್ನು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ರಾಜು ಎನ್. ಅವರು ಉದ್ಘಾಟಿಸಿ ಶುಭಕೋರಿದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು ಸಂಪನ್ಮೂಲ ವ್ಯಕ್ತಿಯಾಗಿದ್ದ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಅವರು “ಸಾಮಾನ್ಯ ಕಾನೂನು” ಕುರಿತು ಉಪನ್ಯಾಸ ನೀಡಿದರು.

ಸಮಾರಂಭದಲ್ಲಿ ಗೌರವಾನ್ವಿತ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರು ಹಾಗೂ ಕುಂದಾಪುರ ತಾಲೂಕು ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿಯಾಗಿರುವ ಧನೇಶ್ ಮುಗಳಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಶ್ರೀನಾಥ್ ರಾವ್, ಕಂಡ್ಲೂರು ಠಾಣೆಯ ಪಿಎಸ್ಐ ಪವನ್ ನಾಯಕ್, ಕಾಲೇಜಿನ ಉಪಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿದರು,.ವಾಣಿಜ್ಯ ಉಪನ್ಯಾಸಕರಾದ ಹರ್ಷ ಶೆಟ್ಟಿ ಸ್ವಾಗತಿಸಿ,ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ವಾಣಿಜ್ಯ ಉಪನ್ಯಾಸಕರಾದ ಅಭಿಜಿತ್ ವಂದಿಸಿದರು.

Leave a Reply