Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನ.12ರಂದು ಕುಂದಾಪುರ ಶ್ರೀ ವೆಂಕಟರಮಣ ಪಿಯು ಕಾಲೇಜಿನಲ್ಲಿ ಬಿಸಿನೆಸ್ ಡೇ
    ಊರ್ಮನೆ ಸಮಾಚಾರ

    ನ.12ರಂದು ಕುಂದಾಪುರ ಶ್ರೀ ವೆಂಕಟರಮಣ ಪಿಯು ಕಾಲೇಜಿನಲ್ಲಿ ಬಿಸಿನೆಸ್ ಡೇ

    Updated:08/11/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಗಾಗಿ ಬಿಸಿನೆಸ್ ಡೇ ಕಾರ್ಯಕ್ರಮವನ್ನು ನ.12ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರಾಗಿಣಿ ಅವರು ಮಾಹಿತಿ ನೀಡಿದರು.

    Click Here

    Call us

    Click Here

    ಕುಂದಾಪುರ ಪ್ರೆಸ್ ಕ್ಲಬ್’ನಲ್ಲಿ ಮಂಗಳವಾರ ಆಯೋಜಿಸಲಾದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ನೀಡಬೇಕೆಂಬ ಉದ್ದೇಶದಿಂದ ಬಿಸಿನೆಸ್ ಡೇ ಹಮ್ಮಿಕೊಳ್ಳಲಾಗಿದ್ದು ನ.12ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ತನಕ ಕಾರ್ಯಕ್ರಮ ನಡೆಯಲಿದೆ.

    ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ತಂಡವನ್ನು ರಚಿಸಿಕೊಂಡು ತಮ್ಮ ಅಭಿರುಚಿಗೆ ತಕ್ಕಂತೆ ಅಂಗಡಿಗಳನ್ನು ತೆರೆದು, ಸಣ್ಣ ಬಂಡವಾಳವನ್ನು ಹೂಡಿ ಲಾಭ ಪಡೆಯುವ ಬಗೆ, ಭಾವನಾತ್ಮಕ, ಸಾಮಾಜಿಕ ಸಂಬಂಧಗಳ ಮೌಲ್ಯವನ್ನು ಅರ್ಥ ಮಾಡಿಕೊಳ್ಳುವುದು, ವಿದ್ಯಾರ್ಥಿಗಳ ಸೃಜನಶೀಲತೆಗೆ ಮೆರಗು ದೊರಕಿಸಲು, ಸ್ವ ಉದ್ಯೋಗದ ಕುರಿತು ಮಾಹಿತಿ, ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿದರೇ ಯಶಸ್ಸು ತಮ್ಮ ಕಡೆ ಒಲಿಯುತ್ತದೆ ಎನ್ನುವುದನ್ನು ಮನವರಿಕೆ ಮಾಡಿ ಕೊಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅಂದಾಜು 40 ರಿಂದ 45 ಅಂಗಡಿ ಮಳಿಗೆಗಳನ್ನು ತೆರೆಯಲು ಕಾಲೇಜಿನ ವತಿಯಿಂದ ಅವಕಾಶ ಮಾಡಿಕೊಡಲಾಗಿದೆ. ಬ್ಯುಸಿನೆಸ್ ಡೇಯಿಂದ ಗಳಿಸಿದ ಲಾಭಾಂಶದಲ್ಲಿ ಕೈಗಾರಿಕೆಗಳಿಗೆ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಕಾರ್ಯಕ್ರಮಕ್ಕೆ ಕುಂದಾಪುರ ತಾಲೂಕಿನಲ್ಲಿರುವ ವಿವಿಧ ಪ್ರೌಢಶಾಲೆ, ಕಾಲೇಜು ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸುತ್ತಿರುವುದರಿಂದ ಸುಮಾರು ಸಾವಿರಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

    ಉದ್ಘಾಟನಾ ಕಾರ್ಯಕ್ರಮ:
    ಬ್ಯುಸಿನೆಸ್ ಡೇ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಉದ್ಘಾಟನೆ ಮಾಡಲಿದ್ದಾರೆ. ಶ್ರೀ ವೆಂಕಟರಮಣ ದೇವ್ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್ ರಿ. ಇದರ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ್ ಇದರ ಕಾರ್ಯದರ್ಶಿ ಬಿ.ಪಿ . ವರದರಾಯ ಪೈ ಭಾಗವಹಿಸಲಿದ್ದಾರೆ. ವೇದಿಕೆಯಲ್ಲಿ ವೆಂಕಟರಮಣ ದೇವ್ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್’ನ ಕಾರ್ಯದರ್ಶಿಯಾದ ಕೆ. ರಾಧಕೃಷ್ಣ ಶೆಣೈ, ಪ್ರಾಂಶುಪಾಲರಾದ ರಾಗಿಣಿ, ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್ ಹಾಗೂ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಶಿಕ್ಷಕರು ಉಪಸ್ಥಿತರಿರುವರು.

    ಸುದ್ಧಿಗೋಷ್ಠಿಯಲ್ಲಿ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್, ಕಾರ್ಯಕ್ರಮ ಸಂಯೋಜಕರಾದ ಸವಿತಾ ರಮೇಶ, ಉಪನ್ಯಾಸಕ ಸುಶಾಂತ್ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    nineteen − eighteen =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.