ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ಗೆ ಉತ್ತಮ ಸೌಹಾರ್ದ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ನೇತೃತ್ವದಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ 2022ರಲ್ಲಿ ತಾಲೂಕಿನ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸಂಸ್ಥೆಗೆ ಉತ್ತಮ ಸೌಹಾರ್ದ ಸಹಕಾರಿ ಸಂಘ ಪ್ರಶಸ್ತಿ ಪ್ರದಾನಿಸಲಾಯಿತು.

Call us

Click Here

ರಾಜ್ಯ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಹಾಗೂ ಕಾರ್ಯದರ್ಶಿ ಕಿಟ್ಟಣ್ಣ ರೈ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಎಸ್. ರಾಜು ಪೂಜಾರಿ

ಈ ವೇಳೆ ರಾಜ್ಯ ಸಹಕಾರಿ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕರಾದ ವೇದವ್ಯಾಸ ಡಿ. ಕಾಮತ್, ಮಂಗಳೂರು ಕ್ಷೇತ್ರ ಶಾಸಕರಾದ ಯು.ಟಿ. ಖಾದರ್, ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ, ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ ಸುಚರಿತ ಶೆಟ್ಟಿ, ದ.ಕ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳ ಅಧ್ಯಕ್ಷರಾದ ಯಶಪಾಲ್ ಸುವರ್ಣ, ರಾಜ್ಯ ಸಹಕಾರ ಸಂಘಗಳ ನಿಬಂಧಕರಾದ ಡಾ. ಕೆ. ರಾಜೇಂದ್ರ, ಮಂಗಳೂರು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ – ಆಪರೇಟಿವ್ ಕಳೆದ 13 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಬೈಂದೂರು ತಾಲೂಕಿನಲ್ಲಿ ಒಟ್ಟು 5 ಶಾಖೆಗಳನ್ನು ಹೊಂದಿದೆ. ವಾರ್ಷಿಕ 200 ಕೋಟಿ ರೂ. ಮಿಕ್ಕಿ ವ್ಯವಹಾರ ನಡೆಸಿ ಲಾಭದೊಂದಿಗೆ ಮುನ್ನಡೆಯುತ್ತಿರುವುದಲ್ಲದೇ ಗ್ರಾಹಕ ಸ್ನೇಹಿ ವ್ಯವಹಾರ ನಡೆಸುವ ಮೂಲಕ ಮನೆಮಾತಾಗಿದೆ. ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅಗತ್ಯವುಳ್ಳವರಿಗೆ ನೆರವು ನೀಡುತ್ತಾ ಬರುತ್ತಿದೆ.

Leave a Reply