ಕೊಡಚಾದ್ರಿ ಕೇಬಲ್ ಕಾರ್ ಯೋಜನೆಯ ಶೀಘ್ರ ಅನುಷ್ಠಾನ: ಸಂಸದ ಬಿ. ವೈ. ರಾಘವೇಂದ್ರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಕೇಂದ್ರದ ಪರ್ವತ ಮಾಲಾ ಯೋಜನೆಯಡಿ ಅನುಷ್ಠಾನಗೊಳ್ಳಲಿರುವ ನೂತನ ಕೇಬಲ್ ಕಾರ್ ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೊಡಚಾದ್ರಿಯಿಂದ ಕೊಲ್ಲೂರಿನವರೆಗೆ ಕೇಬಲ್ ಕಾರ್ ನಿರ್ಮಾಣಕ್ಕೆ ಇರುವ ತೊಡಕುಗಳನ್ನು ಪರಿಹರಿಸಲು ಪ್ರವಾಸೋಧ್ಯಮ ಇಲಾಖೆ, ಅರಣ್ಯ ಇಲಾಖೆ, ರಾಷ್ಟೀಯ ಹೆದ್ದಾರಿ ಅಧಿಕಾರಿಗಳ ಜೊತೆಗೆ ಸೇರಿ ಪರಿಹರಿಸಿ, ಕನಿಷ್ಠ ಒಂದು ತಿಂಗಳ ಅವಧಿಯಲ್ಲಿ ಡಿಪಿಆರ್ ಮಂಜೂರಾತಿ ಪಡೆಯುವುದಾಗಿ ಸಂಸದ ಬಿ. ವೈ. ರಾಘವೇಂದ್ರ ತಿಳಿಸಿದ್ದಾರೆ.

Call us

Click Here

ಶನಿವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕೊಡಚಾದ್ರಿಯ ಸರ್ವಜ್ಞ ಪೀಠದಿಂದ – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ತನಕ ಕೇಬಲ್ ಕಾರ್ ಅಳವಡಿಸಿವ ಕಾಮಗಾರಿಗೆ ಕೇಂದ್ರದ ಭೂ ಸಾರಿಗೆ ಮಂತ್ರಾಲಯದ ನ್ಯಾಶನಲ್ ಹೈವೇ ಲಾಜಿಸ್ಟಿಕ್ ಮ್ಯಾನೇಜ್ಮೆಂಟ್ (NHLML) ಅಧಿಕಾರಿಗಳ ತಂಡವು ಡಿಪಿಆರ್ ಮತ್ತು ಪತನ ನಕ್ಷೆಯನ್ನು ಅಂತಿಮಗೊಳಿಸಲು ಹಾಗೂ ಡಿಪಿಆರ್ ಅನುಮೋದನೆಗೆ ಇರುವ ತೊಡಕುಗಳ ಬಗ್ಗೆ ಅಭ್ಯಾಸ ಮಾಡಿ, ಪರಿಶೀಲಿಸುವ ನಿಟ್ಟಿನಲ್ಲಿ ಎರಡು ದಿನದ ಸರ್ವೇ ಕಾರ್ಯ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಕೇಬಲ್ ಕಾರ್ ನಿರ್ಮಾಣಕ್ಕೆ ಇರುವ ಸಮಸ್ಯೆಯ ಕುರಿತು ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ ರಾಘವೇಂದ್ರ ಅವರೊoದಿಗೆ ಚರ್ಚಿಸಿದ್ದು, ” ಕೇಂದ್ರದ ಪರ್ವತ ಮಾಲಾ ಅಡಿಯಲ್ಲಿ ಬರುವ ನೂತನ ಕೇಬಲ್ ಕಾರ್ ಯೋಜನೆಯು ಶೀಘ್ರ ಅಳವಡಿಸುವ ಕಾರ್ಯ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ”.

ಕೊಡಚಾದ್ರಿಯಿಂದ ಕೊಲ್ಲೂರಿನವರೆಗೆ ಕೇಬಲ್ ಕಾರ್ ನಿರ್ಮಾಣಕ್ಕೆ ಇರುವ ತೊಡಕುಗಳನ್ನು ಪರಿಹರಿಸಲು ಪ್ರವಾಸೋಧ್ಯಮ ಇಲಾಖೆ, ಅರಣ್ಯ ಇಲಾಖೆ, ರಾಷ್ಟೀಯ ಹೆದ್ದಾರಿ ಅಧಿಕಾರಿಗಳ ಜೊತೆಗೆ ಸೇರಿ ಪರಿಹರಿಸಿ, ಕನಿಷ್ಠ ಒಂದು ತಿಂಗಳ ಅವಧಿಯಲ್ಲಿ ಡಿಪಿಆರ್ ಮಂಜೂರಾತಿ ಪಡೆಯುವುದಾಗಿ ತಿಳಿಸಿರುತ್ತಾರೆ.

ಈ ಸಂದರ್ಭದಲ್ಲಿ NHLML ದೆಹಲಿಯ ಹಿರಿಯ ಮ್ಯಾನೇಜರ್ ಅನುರಾಗ್ ತ್ರಿಪಾಟಿ, NHLML ಬೆಂಗಳೂರು ಮ್ಯಾನೇಜರ್ ರೀನಾ ಪವಾರ್, ರಾಷ್ಟ್ರೀಯ ಹೆದ್ದಾರಿ ಇಲಾಖೆ ಶಿವಮೊಗ್ಗದ ಪೀರ್ ಪಾಷಾ, ಡಿಪಿಆರ್ ಕನ್ಸಲ್ಟೆಂಟ್ ಶ್ರವಣ ಕುಮಾರ್, ಪ್ರವಾಸೋಧ್ಯಮ ಇಲಾಖೆಯ ಗುರುಪ್ರಸಾದ್, ವನ್ಯಜೀವಿ ಹಾಗೂ ಅರಣ್ಯ ಇಲಾಖೆಯ ಸಂಪತ್ ಶಾಸ್ತ್ರೀ, ಬೈಂದೂರಿನ ವೆಂಕಟೇಶ್ ಕಿಣಿ, ಶಿವಕುಮಾರ್ ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

Leave a Reply