ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಬೈಂದೂರು ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ನ.22:
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ನೇತೃತ್ವದಲ್ಲಿ ಜರುಗಿದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಕೇಂದ್ರೀಕೃತ ವಿದ್ಯಾರ್ಥಿಗಳ ತಂಡ ರನ್ನರ್ ಅಪ್ ಆಗಿದ್ದು, ಈ ಪೈಕಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Call us

Click Here

ವಿಭಾಗೀಯ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಬೈಂದೂರಿನ ವಿದ್ಯಾರ್ಥಿಗಳು

ಬೈಂದೂರು ಜ್ಯೂನಿಯರ್ ಕಾಲೇಜಿನ 10ನೇ ತರಗತಿ ವಿದ್ಯಾರ್ಥಿಗಳಾದ ವಿಘ್ನೇಶ್ವರ ಹಾಗೂ ರಿತೇಶ್ ಎಂ. ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು. ಮೈಸೂರು ವಿಭಾಗೀಯ ಮಟ್ಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ್ದ ತಂಡವು, ಮೈಸೂರು ವಿಭಾಗೀಯ ಮಟ್ಟದಲ್ಲಿ ವಿಜೇತರಾಗಿ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಜರುಗಿದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಪ್ರಭಾಕರ ಎಸ್. ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದರು.

ಸೃಜನ್

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಂಡದಲ್ಲಿ ಕುಂದಾಪುರ ವೆಂಕಟರಮಣ ಶಾಲೆಯ ವಿದ್ಯಾರ್ಥಿ ಸೃಜನ್, ಮಂಗಳೂರು ಭಗವತಿ ಶಾಲೆಯ ವಿದ್ಯಾರ್ಥಿ ಸುಮುಖ, ಮಂಗಳೂರು ಮೊರಾರ್ಜಿ ಶಾಲೆ ವಿದ್ಯಾರ್ಥಿ ರಾಹುಲ್ ಕೂಡ ಸೇರಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಉಪಪ್ರಾಂಶುಪಾಲರಾದ ಪದ್ಮನಾಭ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಗಣಪ ಜಿ., ಕಾರ್ಯಾಧ್ಯಕ್ಷ ಸದಾಶಿವ ಡಿ. ಪಡುವರಿ ಸೇರಿದಂತೆ ಶಿಕ್ಷಕವೃಂದ ಅಭಿನಂದಿಸಿದೆ.

Click here

Click here

Click here

Click Here

Call us

Call us

Leave a Reply