ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಉಡುಪಿ ಮತ್ತು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ (ರಿ), ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಅವರು ಉದ್ಘಾಟಿಸಿದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ. ನಾರಾಯಣ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಹಿರಿಯ ವಕೀಲರಾದ ಸಂತೋಷ ಶೆಟ್ಟಿ ಗಿಳಿಯಾರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ ನಡೆಯಿತು.
ಉಡುಪಿಯ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ವಿಲ್ಫ್ರೆಡ್ ಡಿಸೋಜಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ. ಗೊಂಡ ಸ್ವಾಗತಿಸಿದರು. ಭಂಡಾರ್ಕಾರ್ಸ್ ಕಾಲೇಜಿನ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಅಕ್ಷತಾ ಸಂವಿಧಾನ ಪ್ರತಿಜ್ಞಾ ವಿಧಿ ಬೋಧಿಸಿದರು.