ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಸಂವಿಧಾನ ದಿನವನ್ನು ಗ್ರಾಮ ಪಂಚಾಯತ್ನಲ್ಲಿ ಶನಿವಾರ ಆಚರಿಸಲಾಯಿತು.
ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ೧೯೪೯ರ ನವೆಂಬರ್ ೨೬ರಂದು ಸಂವಿಧಾನವನ್ನು ಅಂಗೀಕರಿಸಲಾಗಿದ್ದು, ಪ್ರತಿವರ್ಷ ಈ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ದೇಶದ ಸಾರ್ವಭೌಮತೆ, ಜಾತ್ಯಾತೀತತೆ, ಜನತಂತ್ರಾತ್ಮಕ ಗಣರಾಜ್ಯವನ್ನಾಗಿ ರೂಪಿಸಿಸಲು ಸಹಕಾರಿಯಾಗಿದೆ ಎಂದು ಹೇಳಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ಬಿ.ಲಕ್ಷ್ಮೀಕಾಂತ ಮಡಿವಾಳ, ಬಿ.ರಾಘವೇಂದ್ರ ಪೈ, ಬೈರು ಬಸವ ಖಾರ್ವಿ, ಶಾಂತಿ ಖಾರ್ವಿ, ಸಖು ಉದಯ, ಸುಮಿತಾ ಶೇರುಗಾರ್, ಸಾವಿತ್ರಿ ಖಾರ್ವಿ, ರೇಖಾ ಖಾರ್ವಿ, ನಿರ್ಮಲಾ ಪೂಜಾರಿ, ಗ್ರಾಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.