ವಿಶ್ವವಿನಾಯಕ ಆಂಗ್ಲ ಮಾಧ್ಯಮ ಶಾಲೆ: ವಾರ್ಷಿಕ ಕ್ರೀಡಾಕೂಟ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತೆಕ್ಕಟ್ಟೆಯ ವಿಶ್ವವಿನಾಯಕ ನ್ಯಾಷನಲ್ ಇಂಗ್ಲೀಷ್ ಮೀಡಿಯಮ್ ಸ್ಕೂಲ್‌ ವಾರ್ಷಿಕ ಕ್ರೀಡೋತ್ಸವ ಇತ್ತಿಚಿಗೆ ಜರುಗಿತು.

Call us

Click Here

ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಸುದೀಪ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕ್ರೀಡೆ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದರೊಂದಿಗೆ ಉತ್ತಮ ಸಾಧನೆ ಮಾಡಿದರೆ ಬದುಕನ್ನು ಕಟ್ಟಿಕೊಳ್ಳಬಹುದೆಂದು ಎಂದರು.

ಸಮಾರೋಪ ಸಮಾರಂಭದಲ್ಲಿ ನಿವೃತ್ತ ದೈಹಿಕ ಶಿಕ್ಷಕರಾದ ಹೆಚ್, ಮೀರಾ ಸಾಹೇಬ್ರವರು ಮಾತನಾಡಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಇದ್ದು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂದು ತಿಳಿಸಿದರು.

ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ’ಆಲ್ಮೇಡಾರವರು ಮಾತನಾಡಿ ಕ್ರೀಡೆಗಳು ಶಿಸ್ತು, ಸಂಯಮ ಹಾಗೂ ಏಕಾಗ್ರತೆಯನ್ನು ಕಲಿಸುವಲ್ಲಿ ಸಹಕಾರಿಯಾಗಿದೆ ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಭಾಕರ ಶೆಟ್ಟಿಯವರು ಮಕ್ಕಳ ಉತ್ಸಾಹ ಹಾಗೂ ಸ್ಪರ್ಧಾ ಮನೋಭಾವವನ್ನು ಪ್ರಶಂಸಿದರು.

Click here

Click here

Click here

Click Here

Call us

Call us

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಡ್ರಿಲ್, ಯೋಗ, ಲೇಜಿಮ್, ಡಂಬಲ್ಸ್, ಹೂಪ್ಸ್, ಕರಾಟೆ, ಮೊದಲಾದ ಸಾಹಸ ಕ್ರೀಡೆಗಳನ್ನು ಪ್ರದರ್ಶಿಸಿದರು.

ದೈಹಿಕ ಶಿಕ್ಷಕರುಗಳಾದ ಆನಂದ್ ಹಾಗೂ ಪ್ರದೀಪ್ ಕುಮಾರ್ ಶೆಟ್ಟಿಯವರು ಕಾರ್ಯಕ್ರಮ ಸಂಘಟಿಸಿದರು. ಶಿಕ್ಷಕಿಯರಾದ ಸ್ವಾತಿ ರಾವ್ ಹಾಗೂ ಜೋಯ್ಸ್ ಡಿ’ಸೋಜರವರು ಕಾರ್ಯಕ್ರಮ ನಿರ್ವಹಿಸಿದರು, ಶಿಕ್ಷಕಿ ಸ್ಮಿತಾ ನಾಯಕ್ ಹಾಗೂ ಪ್ರಜ್ಞಾ ಕಾಮತ್ ಸ್ವಾಗತಿಸಿ ಪರಿಚಯಿಸಿದರು. ಸುಷ್ಮಾ ವಂದಿಸಿದರು.

Leave a Reply