ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಉಡುಪಿ ಆಯೋಜಿಸಿದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯ ಮೊಗವೀರ ‘ಗುಂಡು ಎಸೆತ’ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾನೆ.
ವಿದ್ಯಾರ್ಥಿಯ ಕ್ರೀಡಾ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.