ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇತ್ತೀಚಿಗೆ ಹೊಸಪೇಟೆಯಲ್ಲಿ ನಡೆದ ಕರ್ನಾಟಕ ಸ್ಟೇಟ್ ಸೀನಿಯರ್ ಪವರ್ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ತಗ್ಗರ್ಸೆಯ ಯುವತಿ ಸೌಮ್ಯ ಬಿ. ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿ ಪದಕ ಗೆದ್ದುಕೊಂಡಿದ್ದಾಳೆ.
ಈ ಮೊದಲು ದಾವಣಗೆರೆಯಲ್ಲಿ ನಡೆದ ‘ಕರ್ನಾಟಕ ರಾಜ್ಯ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ 2022’ ರ ಜೂನಿಯರ್ ವಿಭಾಗದಲ್ಲಿ ಬೆಳ್ಳಿ ಪದಕ, ಮೈಸೂರಿನಲ್ಲಿ ನಡೆದಿದ್ದ ಕರ್ನಾಟಕ ರಾಜ್ಯ ಜ್ಯೂನಿಯರ್, ಸಬ್ ಜ್ಯೂನಿಯರ್ ಹಾಗೂ ಮಾಸ್ಟರ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ – 22ರ ಜ್ಯೂನಿಯರ್ ವಿಭಾಗದಲ್ಲಿ ಕಂಚಿನ ಪದಕದೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದರು.
ಈಕೆ ಬೈಂದೂರು ತಗ್ಗರ್ಸೆಯ ಬಾಬು ಪೂಜಾರಿ ಹಾಗೂ ಮೋಹಿನಿ ದಂಪತಿಗಳ ಪುತ್ರಿಯಾಗಿದ್ದು, ಬ್ರಹ್ಮಾವರ ವೀರಮಾರುತಿ ಜಿಮ್’ನಲ್ಲಿ ತರಬೇತಿ ಪಡೆದಿದ್ದಾರೆ.