‘ಕಾಂತಾರ’ ಸಿನಿಮಾ ನಟ ರಿಷಬ್ ಶೆಟ್ಟಿಗೆ ಕುಂದಾಪುರ ವಕೀಲರ ಸಂಘದಿಂದ ಸನ್ಮಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
‘ಕಾಂತಾರ’ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಕುಂದಾಪುರ ವಕೀಲರ ಸಂಘದ ವತಿಯಿಂದ ದಿನಾಂಕ ಬುಧವಾರ ವಕೀಲರ ಸಂಘದ ವತಿಯಿಂದ ಸಂಘದ ಹಾಲಿನಲಲಿ ಸನ್ಮಾನಿಸಲಾಯಿತು.

Call us

Click Here

ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಕಾಂತಾರ ನಟ ರಿಶಬ್ ಶೆಟ್ಟಿ ಅವರು, ಕಾಲೇಜು ದಿನಗಳಲ್ಲಿ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜು, ನ್ಯಾಯಾಲಯದ ಪರಿಸರದಲ್ಲಿ ಓಡಾಡಿದ್ದ ನೆನಪುಗಳನ್ನು ಹೊಂದಿರುವ ನನಗೆ ಇದೇ ನ್ಯಾಯಾಲಯದ ಸಂಕೀರ್ಣದಲ್ಲಿ ಗೌರವಾನ್ವಿತ ನ್ಯಾಯಾಧೀಶರ ಉಪಸ್ಥಿತಿಯಲ್ಲಿ ಕುಂದಾಪುರ ವಕೀಲರ ಸಂಘದವರು ನೀಡಿದ ಸನ್ಮಾನ ಪಡೆದುಕೊಳ್ಳಲು ತುಂಬಾ ಹೆಮ್ಮೆಯಾಗುತ್ತಿದೆ ಎಂದರು.

ಕುಂದಾಪುರದ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಮ್ ಹುಸೇನ್ ಶೇಖ್, ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ರಾಜು, ಪ್ರಧಾನ ಸಿವಿಲ್ ನ್ಯಾಯಾಧೀಶ ಧನೇಶ್ ಮುಗಳಿ, ಹೆಚ್ಚುವರಿ ಸಿವಿಲ್ & ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ರೋಹಿಣಿ ಡಿ, ಎರಡನೇ ಹೆಚ್ಚುವರಿ ಸಿವಿಲ್ & ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ವಿದ್ಯಾ ಎ.ಎಸ್ ಉಪಸ್ಥಿತರಿದ್ದರು.

ಬನ್ನಾಡಿ ಸೋಮನಾಥ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಬಾರ್ ಅಸೋಸೀಯೇಶನ್ ಪ್ರಧಾನ ಕಾರ್ಯದರ್ಶಿ ಜೆ. ಶ್ರೀನಾಥ ರಾವ್ ಸ್ವಾಗತಿಸಿದರು, ರೇಶ್ಮಾ ಶೆಟ್ಟಿ ಪ್ರಾರ್ಥಿಸಿದರು, ರವಿರಾಜ್ ಶೆಟ್ಟಿ ಮಚ್ಚಟ್ಟು ಕಾರ್ಯಕ್ರಮ ನಿರೂಪಿಸಿದರು, ಪ್ರಸನ್ನ ಶೆಟ್ಟಿ ಕೆರಾಡಿ ವಂದಿಸಿದರು.

Leave a Reply