ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ವತಿಯಿಂದ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ ಓರ್ವ ಕ್ಷಯ ರೋಗಿಯನ್ನು ದತ್ತು ತೆಗೆದುಕೊಳ್ಳಲಾಯಿತು. ರೋಗಿಗೆ ಆರು ತಿಂಗಳ ವರೆಗೆ ಪೌಷ್ಟಿಕಾಂಶಯುಕ್ತ ಆಹಾರ ಸಾಮಗ್ರಿಗಳನ್ನು ಒದಗಿಸುವುದಕ್ಕೆ ಒಪ್ಪಿಗೆ ಸೂಚಿಸಿದ್ದು ಗುರುವಾರ ಸಂಸ್ಥೆಯ ಅಧ್ಯಕ್ಷರಾದ ರಾಜು ಪೂಜಾರಿ ಇವರ ನೇತೃತ್ವದಲ್ಲಿ ಮೊದಲ ತಿಂಗಳ ಆಹಾರಸಮಾಗ್ರಿಯ ಕಿಟ್ಟನ್ನು ವಿತರಿಸಲಾಯಿತು.