ಟಿಕೆಟ್ ವಿಚಾರದಲ್ಲಿ ಭಾಜಪ ಮುಖಂಡರು ಗೊಂದಲ ಸೃಷ್ಟಿಸಿದರೆ ಸಹಿಸೊಲ್ಲ: ಕುಯಿಲಾಡಿ ಎಚ್ಚರಿಕೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಳಮಟ್ಟದ ಸಂಘಟನೆ ಹೊಂದಿರುವ ಬಿಜೆಪಿ ಪಕ್ಷದಲ್ಲಿ ಎಲ್ಲರಿಗೂ ಸಮಾನ ಅವಕಾಶ ಇದೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ಮಾಡಲಿದ್ದಾರೆ. ತನಗೇ ಟಿಕೆಟ್ ಆಗಿದೆ ಎಂದು ತಿರುಗಾಡುವುದು, ಅನಧಿಕೃತ ಸಭೆ, ಹೇಳಿಕೆಗಳನ್ನು ನೀಡಿ ಗೊಂದಲ ನಿರ್ಮಾಣ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ ನೀಡಿದ್ದಾರೆ.

Call us

Click Here

ಮಂಗಳವಾರ ಸಂಜೆ ಹೆಮ್ಮಾಡಿಯ ಖಾಸಗಿ ಹೋಟೇಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪಕ್ಷದ ಸಂಘಟನೆಗಾಗಿ ಕೆಲಸ ಮಾಡುವ ಎಲ್ಲರನ್ನೂ ಪಕ್ಷ ಸ್ವಾಗತಿಸುತ್ತದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಹಿಂದುತ್ವ ಪರವಾದ ಅಲೆ ಪ್ರಬಲವಾಗಿರುವ ಕಾರಣದಿಂದಾಗಿ ಜಾತಿ ಸಮೀಕರಣಗಿಂತ, ಪಕ್ಷದ ತತ್ವ, ಸಿದ್ದಾಂತ ಒಪ್ಪಿಕೊಳ್ಳುವ ಅಭ್ಯರ್ಥಿಗಳಿಗೆ ಅವಕಾಶ ದೊರಕುವ ಸಾಧ್ಯತೆಗಳನ್ನು ಅಲ್ಲಗಳಿಯುವಂತಿಲ್ಲ. ಹಾಗೆಯೇ 3 – 4 ಬಾರಿ ಶಾಸಕರಾದವರು, ಹೊಸಬರಿಗೆ ಅವಕಾಶ ನೀಡುವ ಸ್ವಯಂ ತೀರ್ಮಾನ ಕೈಗೊಳ್ಳಬೇಕು ಎಂದರು.

ಬೈಂದೂರು ಸೇರಿದಂತೆ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳು ಯಾರು ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಆದರೆ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ನಮಗೆ ಆಗಿದೆ ಪಕ್ಷ ತಿರುಗಲು ಹೇಳಿದೆ ಎನ್ನುವ ಮೂಲಕ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ಪಕ್ಷ ಇದನ್ನು ಗಂಭೀರವಾಗಿ ಪರಿಗಣಿಸಲಿದ್ದು, ಇಂತಹವರ ವಿರುದ್ಧ ನೋಟಿಸು ನೀಡಿ, ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದ ಅವರು ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿಯವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಕ್ಷೇತ್ರದ ಜನರಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಪಕ್ಷದ ಶಾಸಕರಾಗಿರವುದರಿಂದಾಗಿ ಅವರೇ ನಮ್ಮ ನಾಯಕರಾಗಿದ್ದಾರೆ ಎಂದರು.

ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ಬೂತ್ ಮಟ್ಟದಲ್ಲಿ ಸಂಘಟನೆಯ ಅವಲೋಕನ ನಡೆಸಲಾಗಿದೆ. ಜಿಲ್ಲೆಯ ಎಲ್ಲ 5 ಕ್ಷೇತ್ರಗಳ ಶಾಸಕರು ಉತ್ತಮವಾಗಿದ್ದಾರೆ. ಸ್ಥಳಿಯಾಡಳಿತ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ, ವಿಧಾನಸಭೆ, ಲೋಕಸಭೆ, ವಿಧಾನಪರಿಷತ್ ಚುನಾವಣೆಗಳಲ್ಲಿ ಪಕ್ಷಕ್ಕೆ ಬಹುಮತ ಇರುವುದರಿಂದ ಮುಂದಿನ ಚುನಾವಣೆಯಲ್ಲಿಯೂ ಪಕ್ಷದ ಅಭ್ಯರ್ಥಿಗಳು ನಿಚ್ಚಳವಾಗಿ ಗೆಲುವು ಸಾಧಿಸಲಿದ್ದಾರೆ ಎಂದರು.

ಬಿಜೆಪಿಯದು ಡೊಂಗಿ ಹಿಂದುತ್ವ ಎನ್ನುವ ಪ್ರಮೋದ್ ಮುತಾಲಿಕ್ ಅವರು ಚುನಾವಣೆಗೆ ಸ್ಪರ್ಧಿಸಿದಲ್ಲಿ, ಕಾರ್ಕಳ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರು ಫಲಿತಾಂಶದಲ್ಲಿ ಉತ್ತರ ಕೊಡುತ್ತಾರೆ. ಸಚಿವ ಸುನೀಲ್ ಕುಮಾರ್ ಪ್ರಖರ ಹಿಂದುತ್ವವಾದಿಯಾಗಿದ್ದು, ಸಂಘಟನೆ ಹಾಗೂ ಅಭಿವೃದ್ಧಿಯಲ್ಲಿ ಕಾರ್ಕಳವನ್ನು ರಾಜ್ಯದಲ್ಲಿಯೇ ಮುಂಚೂಣಿಯಲ್ಲಿ ಇರಿಸಿದ್ದಾರೆ. ಮುತಾಲಿಕ್ ಅವರ ಬಗ್ಗೆ ಗೌರವ ಇದೆ. ಇದು ಖಂಡಿತ ಅವರ ತೀರ್ಮಾನವಲ್ಲ, ಕೆಲ ವಿಘ್ನ ಸಂತೋಷಿಗಳು, ಗೊಂದಲ ಸೃಷ್ಟಿಸಲು ಅವರನ್ನು ಅಭ್ಯರ್ಥಿಯಾಗಿ ಬಿಂಬಿಸಲು ಹೊರಟಿದ್ದಾರೆ ಎಂದರು.

Click here

Click here

Click here

Click Here

Call us

Call us

ಪತ್ರಿಕಾಗೋಷ್ಠಿಯಲ್ಲಿ ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ, ಪ್ರಕಾಶ್ ಪೂಜಾರಿ ಜಡ್ಡು, ಕೋಶಾಧಿಕಾರಿ ಅಶೋಕ ಕುಮಾರ ಶೆಟ್ಟಿ ಸಂಸಾಡಿ, ಜಿಲ್ಲಾ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ದಾವೂದ್ ಇದ್ದರು.

Leave a Reply