ಪ್ರೊ.‌ ಎ.ವಿ. ನಾವಡ ಅವರಿಗೆ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರಶಸ್ತಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ, ಜಾನಪದ ಸಂಶೋಧಕ ಹಾಗೂ ಹಿರಿಯ ಸಾಹಿತಿ ಪ್ರೊ. ಎ.ವಿ. ನಾವಡ ಅವರಿಗೆ ಈ ಬಾರಿಯ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರಶಸ್ತಿ ನೀಡಲಾಗುವುದು ಎಂದು ಬಸ್ರೂರು ಅಪ್ಪಣ್ಣ ಹೆಗ್ಡೆ ದತ್ತಿನಿಧಿ ಪ್ರತಿಷ್ಠಾನದ ರಾಮ್ ಕಿಶನ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Call us

Click Here

ಡಿ.24 ರಂದು ಸಂಜೆ 4ಕ್ಕೆ ಬಸ್ರೂರಿನ‌ ಶ್ರೀ ಶಾರದಾ ಕಾಲೇಜಿನಲ್ಲಿ, ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ವತಿಯಿಂದ ನಡೆಯುವ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ 88 ನೇ ಹುಟ್ಟುಹಬ್ಬ ಆಚರಣೆ, ದತ್ತಿನಿಧಿ ವಿತರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಅಶಕ್ತರಿಗೆ ದತ್ತಿನಿಧಿ ವತಿಯಿಂದ ಸಹಾಯ ಧನ ವಿತರಣೆ ಮಾಡಲಾಗುವುದು.‌ ಸಭಾ ಕಾರ್ಯಕ್ರಮದ ಬಳಿಕ ನೃತ್ಯ ನಿಕೇತನ ಕೊಡವೂರು ಅವರಿಂದ ನೃತ್ಯ ಸಿಂಚನ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಬಿ.ಎ. ವಿವೇಕ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಮಾರು ಸಾಂದೀಪನಿ ಆಶ್ರಮದ ಈಶ ವಿಠ್ಠಲದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply