ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ,ಡಿ.20: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ 4 ಕಳ್ಳತನ ಪ್ರಕರಣಗಳು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ 1 ಕಳವು ಪ್ರಕರಣದ ಆರೋಪಿ ವಿಜಯ ಕುಮಾರ್ ಶೆಟ್ಟಿ (28) ಎಂಬಾತನನ್ನು ಬ್ರಹ್ಮಾವರ ಸಿ.ಪಿ.ಐ ನೇತೃತ್ವದ ವಿಶೇಷ ತಂಡವು ನೀಲಾವರ ಕ್ರಾಸ್ ಬಳಿ ಬಂಧಿಸಿದೆ.
ಆರೋಪಿ ವಿಜಯ ಕುಮಾರ್ ಶೆಟ್ಟಿಯ ಮೇಲೆ ಈ ಹಿಂದೆ ದ.ಕ ಜಿಲ್ಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಮಂಗಳೂರು ಬಂದರು ಪೊಲೀಸ್ ಠಾಣೆಯಲ್ಲಿ 4 ಪ್ರಕರಣ, ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ಠಾಣೆಯಲ್ಲಿ 1 ಪ್ರಕರಣ, ಹರಿಹರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಶಿವಮೊಗ್ಗ ಜಿಲ್ಲೆ ಆಗುಂಬೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ತುಂಗಾ ನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಹಾಗೂ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣಗಳು ದಾಖಲಾಗಿರುತ್ತದೆ. ಹೆಚ್ಚಿನ ಪ್ರಕರಣಗಳಲ್ಲಿ ಆರೋಪಿಯು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು ಜಾಮೀನು ರಹಿತ ವಾರಂಟ್ ಜಾರಿಯಾಗಿತ್ತು.
ಬ್ರಹ್ಮಾವರ ಹಾಗೂ ಕೋಟ ಠಾಣಾ ವ್ಯಾಪ್ತಿಯಲ್ಲಿ 2022ರ ಮಾರ್ಚ್ ಮತ್ತು ಎಪ್ರೀಲ್ ತಿಂಗಳ ಮಧ್ಯಾವಧಿಯಲ್ಲಿ ಕಾಡೂರು ಗ್ರಾಮದ ತಂತ್ರಾಡಿ ಸದಾಶಿವ ಮಹಾಬಲೇಶ್ವರ ರಾವ್ ರವರ ಹಳೇ ಮನೆಯ ಬಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿ ಸುಮಾರು 280 ಕೆಜಿ ತೂಕದ ರೂ-140000/- ಮೌಲ್ಯದ ಏಳು ಮೂಟೆ ಕಾಳು ಮೆಣಸುಗಳನ್ನು ಕಳವು. 2022ರ ಜುಲಾಯಿ ತಿಂಗಳಲ್ಲಿ ರಾತ್ರಿ ನಡೂರು ಗ್ರಾಮದ ನಡೂರು ಪಟೇಲ್ ಅಂತಯ್ಯ ಶೆಟ್ಟಿ ಸ್ಮಾರಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೀಗ ಮುರಿದು ಒಂದು ಇಂಡೇನ್ ಕಂಪೆನಿಯ ಗ್ಯಾಸ್ ಸಿಲಿಂಡರ್ ಕಳವು. 2022ರ ಜುಲಾಯಿ ತಿಂಗಳಲ್ಲಿ ಯಡ್ತಾಡಿ ಗ್ರಾಮದ ದಾಲಾಡಿ ಯಲ್ಲಿರುವ ವಾಣಿ ಭಂಡಾರಿ ರವರ ಮನೆಯಲ್ಲಿ ರಾತ್ರಿ ಸಮಯ ಲೈಟ್ ಇಲ್ಲದೇ ಇದ್ದುದನ್ನು ಗಮನಿಸಿ ಮುಖ್ಯ ದ್ವಾರದ ಬೀಗ ಮುರಿದು ಒಳ ಪ್ರವೇಶಿಸಿ ಸುಮಾರು 504000/- ರೂ ಮೌಲ್ಯದ ಚಿನ್ನಾಭರಣ ಹಾಗೂ ರೂ-15000/- ನಗದನ್ನು ಕಳವು. 2022ನೇ ನವೆಂಬರ್ ತಿಂಗಳಿನಲ್ಲಿ ಕೋಟ ಠಾಣಾ ವ್ಯಾಪ್ತಿಯ ಬಿಲ್ಲಾಡಿ ಮಾನ್ಯ ಶಾಲೆಯ ಎದುರು ಇರುವ ಸುಜಾತ ಶೆಟ್ಟಿ ರವರ ಮನೆ ಕಳ್ಳತನ. 2022ನೇ ನವೆಂಬರ್ ತಿಂಗಳಿನಲ್ಲಿ ಆರೂರು ಗ್ರಾಮದ ಮೇಲಡ್ಪು ಭಾಸ್ಕರ ಶೆಟ್ಟಿರವರ ಮನೆಯಲ್ಲಿ ಲೈಟ್ ಇಲ್ಲದಿರುವುದು ಕಂಡು ಮನೆಯ ಬಾಗಿಲನ್ನು ಮುರಿದು ಅಂದಾಜು ರೂ- 31000/- ಮೌಲ್ಯದ ಚಿನ್ನ, ಬೆಳ್ಳಿಯ ಆಭರಣ ಮತ್ತು ಸೀರೆ ಹಾಗೂ ನಗದು ರೂ-5000/- ಮೌಲ್ಯದ ಸ್ವತ್ತುಗಳನ್ನು ಕಳವು ನಡೆಸಿದ್ದಾನೆ.
ಆರೋಪಿ ವಿಜಯ ಕುಮಾರ ಶೆಟ್ಟಿಯಿಂದ ಕೃತ್ಯಕ್ಕೆ ಬಳಸುತ್ತಿದ್ದ KA-20-EP-6201 ನೇ ಹೋಂಡಾ ಮ್ಯಾಟ್ರಿಕ್ಸ್ ಸ್ಕೂಟರ್ ಮೌಲ್ಯ ರೂ-30,000, ಕಳವು ಮಾಡಿದ ರೂ-4,64,700/- ಮೌಲ್ಯದ ಚಿನ್ನಾಭರಣಗಳು, ಕಳವು ಮಾಡಿದ ರೂ- 2080/- ಮೌಲ್ಯದ ಬೆಳ್ಳಿ ನಾಣ್ಯಗಳು, ಕಳವು ಮಾಡಿದ ರೂ 9,000/- ಮೌಲ್ಯದ ಸೀರೆ-1, ಕಳವು ಮಾಡಿದ ಕಾಳುಮಣಸಿನ ಮಾರಾಟದಿಂದ ಪಡೆದ ನಗದು ರೂ-84,000, ಕಳವು ಮಾಡಿದ ಗ್ಯಾಸ್ ಸಿಲಿಂಡರ್-1 ಮೌಲ್ಯ ರೂ- 2,800 ವಸ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಕ್ಷಯ ಎಂ. ಹೆಚ್ ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್ .ಟಿ ಸಿದ್ದಲಿಂಗಪ್ಪ ರವರ ಮಾರ್ಗದರ್ಶನದಂತೆ, ಸುಧಾಕರ ಎಸ್ ನಾಯ್ಕ, ಪೊಲೀಸ್ ಉಪಾಧೀಕ್ಷಕರು, ಉಡುಪಿ ಉಪ ವಿಭಾಗ, ಉಡುಪಿ ಇವರ ನಿರ್ದೇಶನದಂತೆ ಈ ಕಾರ್ಯಾಚರಣೆಯಲ್ಲಿ ಅನಂತ ಪದ್ಮನಾಭ, ಸಿ.ಪಿ.ಐ ಬ್ರಹ್ಮಾವರ ವೃತ್ತ, ಬ್ರಹ್ಮಾವರ ಠಾಣಾ ಪಿ.ಎಸ್.ಐ ರಾಜಶೇಖರ ವಂದಲಿ, ಠಾಣಾ ತನಿಖೆ ಪಿ.ಎಸ್. ಐ ಮುಕ್ತಾಬಾಯಿ, ಕೋಟ ಠಾಣಾ ಪಿಎಸ್ಐ ಮಧು ಬಿ ಇ, ಬ್ರಹ್ಮಾವರ ಠಾಣಾ ಸಿಬ್ಬಂದಿಗಳಾದ ವೆಂಕಟರಮಣ ದೇವಾಡಿಗ, ಪ್ರವೀಣ ಶೆಟ್ಟಿಗಾರ್, ಮಹಮದ್ ಅಜ್ಮಲ್, ರಾಘವೇಂದ್ರ ಕಾರ್ಕಡ, ಸುರೇಶ್ ಶೆಟ್ಟಿ, ಗಣೇಶ್ ದೇವಾಡಿಗ, ದಿಲೀಪ, ಸಂತೋಷ ರಾಥೋಡ್ , ಸಂದೀಪ, ದೇವರಾಜ್, ಗುರು ಕಿರಣ, ಸುರೇಶ್ ಬಾಬು, ಅಂಬ್ರಯ್ಯ ಹೀರೆಮಠ, ನವೀನ ಯಾದವ್, ಕೋಟ ಠಾಣಾ ಸಿಬ್ಬಂದಿ ರಾಘವೇಂದ್ರ ಶೆಟ್ಟಿ, ಹಾಗೂ ಕಂಪ್ಯೂಟರ್ ಸಿಬ್ಬಂದಿ ಯೋಗೀಶ್ ಮತ್ತು ಜಿಲ್ಲಾ ಸಿಡಿಆರ್ ವಿಭಾಗದ ನಿತಿನ್, ದಿನೇಶ್, ಹಾಗೂ ಚಾಲಕ ಅಣ್ಣಪ್ಪ ಮತ್ತು ಸಂತೋಷ ಪ್ರಮುಖ ಪಾತ್ರ ವಹಿಸಿರುತ್ತಾರೆ.