ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಹಾಗೂ ಕೆ.ಎಲ್.ಇ ಪದವಿ ಪೂರ್ವ ಕಾಲೇಜು ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣಮ್ಯ ಹಾಗೂ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧಾರಿಣಿ ಕೆ. ಎಸ್ ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿದ್ದಾರೆ.










