ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ನಮ್ಮ ದೇಶಕ್ಕೆ ದೊಡ್ಡ ಚರಿತ್ರೆಯಿದ್ದು ಅದರೊಂದಿಗೆ ಮಾನವೀಯ ಮೌಲ್ಯವುಳ್ಳವರೂ, ಚಾರಿತ್ರ್ಯವಂತರ ಅಗತ್ಯವಿದೆ. ಅಂತವರನ್ನು ನಿರ್ಮಿಸುವ ಕಾರ್ಯದಲ್ಲಿ ಸ್ಕೌಟ್ಸ್ ಗೈಡ್ಸ್ ತೊಡಗಿದೆ. ವಿದ್ಯಾರ್ಥಿ ದೆಸೆಯಿಂದಲೇ ಶಿಸ್ತು, ಜೀವನಮೌಲ್ಯ, ಹಿರಿಯರಿಗೆ ಆದರಿಸುವ, ಕಿರಿಯರನ್ನು ಪ್ರೀತಿಸುವ ಗುಣಧರ್ಮವನ್ನು ಸ್ಕೌಟ್ಸ್ ಗೈಡ್ಸ್ ಕಲಿಸುತ್ತದೆ ಎಂದು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಎಸ್. ಬೊಮ್ಮಾಯಿ ಹೇಳಿದರು.
ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಐದನೇ ದಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಕೌ ಟ್ಸ್ – ಗೈಡ್ಸ್ ಸಂಸ್ಥೆ ಇದೀಗ ಸಂಸ್ಕೃತಿ ಬಿಂಬಿಸುವ ಹಲವು ಕಾರ್ಯಕ್ರಮವನ್ನು ಏರ್ಪಡಿಸುವ ಮೂಲಕ ಸಂಸ್ಕೃತಿಯ ಚಳುವಳಿ ಆರಂಭಿಸಿದ್ದಾರೆ. ಇದು ಭಾರತೀಯ ಪರಂಪರೆಯ ಉಳಿವಿಕೆಗೆ ಹಾಗೂ ಭವ್ಯ ಭಾರತ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದೆ ಎಂದರು.
ಮಕ್ಕಳಿಗೆ ವಿದ್ಯೆ ಜತೆಗೆ ಬೌದ್ಧಿಕ ಜ್ಞಾನ ಅಗತ್ಯ. ಶಿಸ್ತು, ಜೀವನ ಮೌಲ್ಯವನ್ನು ಸಮಂಜಸವಾಗಿ ತಿಳಿಸಿದರೇ ಮಗು ಭವಿ?ದಲ್ಲಿ ಉತ್ತಮ ನಾಗರಿಕನಾಗುತ್ತಾನೆ. ಸಂಸ್ಕ್ರತಿಯ ಉಳಿವಿಕೆಯ ಮೇಲೆ ಭಾರತದ ಭವಿ? ನಿರ್ಧರಿತವಾಗಿದೆ. ಸ್ಕೌಟ್ಸ್- ಗೈಡ್ಸ್ ಸಂಸ್ಥೆ ಸದಾ ಸಂಸ್ಕೃತಿಯ ಉಳಿವಿಗೆ ಶ್ರಮಿಸುತ್ತಿದೆ ಎಂದರು.
ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಕಾರ್ಯಕ್ರಮಕ್ಕೆ ಸರಕಾರದಿಂದ ಅಗತ್ಯ ನೆರವು ಒದಗಿಸಲಾಗುವುದು ಎಂದರು. ಆಳ್ವಾಸ್ ಸಂಸ್ಥೆಯ ಬಗ್ಗೆಯೂ ಮೆಚ್ಚುಗೆ ಮಾತುಗಳನ್ನಾಡಿದ ಅವರು, ಮೋಹನ ಆಳ್ವರ ಈ ಜ್ಞಾನಮಂದಿರವನ್ನು ನೋಡಿದಾಗ ರೋಮಾಂಚನವಾಗುತ್ತದೆ. ಇಂತಹ ಸಂಸ್ಥೆಯನ್ನು ಕಟ್ಟಲು ಸಾಧ್ಯವೇ ಎನ್ನುವಂತೆ ಅದ್ಭುತ ಕಾರ್ಯ ಮಾಡಿದ್ದಾರೆ. ಮಾತನಾಡುವುದು ಸುಲಭ ಆದರೆ ಮಾಡಿ ತೋರಿಸುವುದು ಕಷ್ಟ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿ?ನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಮಾತನಾಡಿ. ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ. ಇದು ಮಗುವು ಉತ್ತಮ ಸಾಧಕನಾಗಲು ಎಡೆಮಾಡಿಕೊಡುತ್ತದೆ. ಸ್ಕೌಟ್ಸ್ ಗೈಡ್ಸ್ ಸಂಸ್ಥೆ ಮಕ್ಕಳಿಗೆ ಗೌರವಯುತ ಜೀವನ ನಡೆಸಲು ಬೇಕಾದ ಮೌಲ್ಯವನ್ನು ನಿರ್ದೇಶಿಸುತ್ತಿದೆ. ಇದು ಸಂಸ್ಥೆಗೆ ಹೆಮ್ಮೆ ಎಂದ ಅವರು, ಮಂಗಳೂರಿನ ಪಿಲಿಕುಳದಲ್ಲಿ ಯುವ ಶಕ್ತಿ ಕೇಂದ್ರ ನಿರ್ಮಿಸುವ ಗುರಿಯಿದ್ದು, ಜಾಬೂಂರಿಯ ನೆನಪಿಗಾಗಿ ೧೫ ಎಕರೆ ಜಾಗ ಮೀಸಲಿರಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಆಳ್ವಾಸ್ ಸಾಂಸ್ಕೃತಿಕ ವಿದ್ಯಾರ್ಥಿಗಳು ಆರತಿ ಬೆಳಗಿ ಸ್ವಾಗತಿಸಲಾಯಿತು. ಈ ಸಂದರ್ಭ ಗೌರವದ ಆರತಿ ಎಂಬ ಹಾಡನ್ನು ಹಾಡಿದರು. ಉದ್ಯಮಿ ಶ್ರೀಪತಿ ಭಟ್ ಕುಟುಂಬವೂ ಶಾಲು ಹೊದಿಸಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರ ಬೆಳ್ಳಿಯ ಚಿತ್ರ ಪಟ ಉಡುಗೊರೆ ನೀಡಿ ವಿಶೇ? ಗೌರವ ಸೂಚಿಸಿದರು.
ಕಾರ್ಯಕ್ರಮದಲ್ಲಿ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್, ಕರ್ನಾಟಕ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಕ್ರೀಡಾ ಸಚಿವ ನಾರಾಯಣ ಗೌಡ, ಭಾರತ್ ಸ್ಕೌಟ್ಸ್ -ಗೈಡ್ಸ್ ಅಧ್ಯಕ್ಷ ಹಾಗೂ ರಾಜ್ಯ ಸಭಾ ಸದಸ್ಯ ಅನಿಲ್ ಕುಮಾರ್ ಜೈನ್. ಕರ್ನಾಟಕ ರಾಜ್ಯ ಸೌಟ್ಸ್ ಗೈಡ್ಸ್ ಆಯುಕ್ತ ಪಿ.ಜಿ ಆರ್ ಸಿಂದ್ಯಾ, ಪಶ್ಚಿಮ ವಲಯದ ಐಜಿಪಿ ಡಾ. ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಸಿಇಒ ಡಾ. ಕುಮಾರ್, ಜಿಲ್ಲಾಧಿಕಾರಿ ರವಿ ಕುಮಾರ್ ಎಂ ಆರ್, ಉದ್ಯಮಿ ಶ್ರೀಪತಿ ಭಟ್, ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ನಿರೂಪಿಸಿ, ವಂದಿಸಿದರು.