ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಪುತ್ತಿಗೆಯ ಶ್ರೀ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಸೌಟ್ಸ್ ಮತ್ತು ಗೈಡ್ಸ್ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಸಮಾರೋಪ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿ?ನದ ಅಧ್ಯಕ್ಷ ಹಾಗೂ ಭಾರತ್ ಸೌಟ್ಸ್ ಗೈಡ್ಸ್ ಸಂಸ್ಥೆಯ ಜಿಲ್ಲಾ ಮುಖ್ಯ ಆಯುಕ್ತ ಡಾ. ಎಂ ಮೋಹನ್ ಆಳ್ವರಿಗೆ ಸೌಟ್ಸ್ ಮತ್ತು ಗೈಡ್ಸ್ ಅತ್ಯುನ್ನತ ಪ್ರಶಸ್ತಿಯಾದ ಸಿಲ್ವರ್ ಎಲಿಫೆಂಟ್ ಪ್ರಶಸ್ತಿಯನ್ನು ಪ್ರದಾನಿಸಲಾಯಿತು.
ಈ ಸಂದರ್ಭ ಭಾರತ್ ಸೌಟ್ಸ್ ಗೈಡ್ಸ್ ಸಂಸ್ಥೆಯ ಕರ್ನಾಟಕ ರಾಜ್ಯ ಆಯುಕ್ತ ಪಿ.ಜಿ ಆರ್ ಸಿಂಧ್ಯಾ ಅವರು ಸೇರಿದಂತೆ ಹಲವು ಅತಿಥಿ ಗಣ್ಯರು ಉಪಸ್ಥಿತರಿದ್ದರು.










