ಮೀನುಗಾರರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಡಿ.28:
ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮಾನ್ಯ ಮುಖ್ಯ ಮಂತ್ರಿಗಳು ಘೋಷಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಮೀನುಗಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬಂಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿಂದ ಮಾಹಿತಿ ಪಡೆದು, ಶೀಘ್ರವಾಗಿ ಪ್ರೂಟ್ಸ್ ಐಡಿಯನ್ನು ಸೃಜನೆ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply