ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೈಂದೂರು ತಾಲೂಕಿನಲ್ಲಿ ಖಾಯಂ ಆಗಿ ಆರಂಭಗೊಂಡ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನಾ ಸಮಾರಂಭವು ಉಡುಪಿ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಮತ್ತು ಬೈಂದೂರು ವಕೀಲ ಸಂಘದ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜರುಗಿತು.
ಬೈಂದೂರು ನೂತನ ನ್ಯಾಯಾಲಯವನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್, ಪ್ರಸನ್ನ ಬಿ. ವರಾಲೆ ಅವರನ್ನು ಸನ್ಮಾನಿಸಲಾಯಿತು.
ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಗೌರವಾನ್ವಿತ ನ್ಯಾಯಮೂರ್ತಿ ಎಸ್. ಜ. ಪಂಡಿತ್, ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಪ್ರದೀಪ್ ಸಿಂಗ್ ಯೆರೂರ್, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ, ನ್ಯಾಯಮೂರ್ತಿ ಸಿ.ಎಂ. ಜೋಶಿ, ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ವಿಲೇಖನಾಧಿಕಾರಿ ಮುರಳಿಧರ್ ಪೈ.ಬಿ. ಲೋಕೋಪಯೋಗಿ ಇಲಾಖೆ ಕೇಂದ್ರ ವಲಯ ಶಿವಮೊಗ್ಗದ ಮುಖ್ಯ ಅಭಿಯಂತರ ಕಾಂತರಾಜು ಬಿ.ಟಿ ಮತ್ತು ಉಡುಪಿ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ, ಬೈಂದೂರು ವಕೀಲ ಸಂಘ ಅಧ್ಯಕ್ಷರಾದ ಮೋಬಿ ಪಿ.ಸಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪೂಜಾರಿ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಬೈಂದೂರು ತಾಲೂಕಿಗೆ ಖಾಯಂ ಕೋರ್ಟ್ ಮಂಜೂರು – https://kundapraa.com/?p=64227 .