ಕೊಲ್ಲೂರು: ಸ್ಥಳೀಯ -ವಲಸೆ ಹಕ್ಕಿಗಳ ವೀಕ್ಷಣೆ, ವಿಚಾರಗೋಷ್ಠಿ – ‘ಕರ್ನಾಟಕ ಹಕ್ಕಿ ಹಬ್ಬ’ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಕರ್ನಾಟಕ ಅರಣ್ಯ ಇಲಾಖೆ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ಹಾಲ್ಕಲ್‌ನಲ್ಲಿ ನಡೆದ ಒಂಭತ್ತನೇ ’ಕರ್ನಾಟಕ ಹಕ್ಕಿ ಹಬ್ಬ’ವನ್ನು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಉದ್ಘಾಟಿಸಿದರು.

Call us

Click Here

ಬಳಿಕ ಅವರು ಮಾತನಾಡಿ, ಕೊಲ್ಲೂರು ಅಭಯಾರಣ್ಯ ಸೇರಿದಂತೆ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿರುವ ಹಲವು ಬಗೆಯ ಅಪರೂಪದ ಹಕ್ಕಿಗಳ ಬಗ್ಗೆ ಹಕ್ಕಿ ಹಬ್ಬದ ಮೂಲಕ ನಾಡಿಗೆ ಪರಿಚಯಿಸುವ ಕಾರ್ಯ ಉತ್ತಮವಾದುದು ಎಂದು ಹೇಳಿದರು.

ಅರಣ್ಯ ಇಲಾಖೆ ಮೂಲಕ ಅರಣ್ಯ ಹಾಗೂ ಇಲ್ಲಿನ ಪ್ರಾಣಿ-ಪಕ್ಷಿಗಳ ರಕ್ಷಣೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಆದರೆ ಈ ಕಾಡಿನ ತಪ್ಪಲು ಪ್ರದೇಶದಲ್ಲಿ ಶೇ.95ರಷ್ಟು ಬಡತನ ರೇಖೆಗಿಂತ ಕೆಳಗಿರುವ ಬುಡಕಟ್ಟು ಜನಾಂಗದವರು ಕೃಷಿಯನ್ನೇ ನಂಬಿ ಬದುಕುತ್ತಿದ್ದಾರೆ. ಅವರಿಗೆ ಮೂಕಸೌಕರ್ಯ ಒದಗಿಸುವುದಕ್ಕೆ ಆರಣ್ಯ ಇಲಾಖೆ ಕಾನೂನುಗಳು ತೊಡಕಾಗುತ್ತಿದೆ. ಈ ನೆಲೆಯಲ್ಲಿ ಅರಣ್ಯ ಇಲಾಖೆಯ ಕಾನೂನುಗಳನ್ನು ಸ್ವಲ್ಪಮಟ್ಟಿಗೆ ಸಡಿಲಿಸುವ ಮೂಲಕ ಈ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಸಹಕಾರ ನೀಡಬೇಕಿದೆ. ಕಾಡುಪ್ರಾಣಿಗಳ ರಕ್ಷಣೆಯೊಂದಿಗೆ ಕಾಡಂಚಿನಲ್ಲಿ ಬದುಕು ಕಟ್ಟಿಕೊಂಡವರನ್ನು ಇಲಾಖೆ ರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದರು.

ನಂತರ ಮಾತನಾಡಿದ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಕಾರ್ಯಕಾರಿ ಸಮಿತಿ ಅಧ್ಯಕ್ಷ ಎಂ. ಮದನ ಗೋಪಾಲ್, ರಾಜ್ಯದಲ್ಲಿ ಇದು ೯ನೇ ಬಾರಿ ಹಕ್ಕಿಹಬ್ಬ ಉತ್ಸವ ನಡೆಯುತ್ತಿದ್ದು, ಈ ಭಾಗದಲ್ಲಿ ವಲಸೆ ಮತ್ತು ಸ್ಥಳೀಯ ಸುಮಾರು ೩೦೦ಕ್ಕೂ ಹೆಚ್ಚು ಹಕ್ಕಿಗಳಿವೆ. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು. ಸಮುದಾಯದ ಬೆಂಬಲವಿಲ್ಲದೆ ಪಕ್ಷಿಗಳ ರಕ್ಷಣೆ ಸಾಧ್ಯವಿಲ್ಲ, ಈ ಬಾರಿಯ ಹಕ್ಕಿಹಬ್ಬದಲ್ಲಿ ಮಲ್ಗಾರ್ ಟ್ರೋಗನ್ ರಾಯಭಾರಿ ಹಕ್ಕಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ರಾಜ್ಯ ಮತ್ತು ದೇಶದ ವಿವಿಧ ವನ್ಯಜೀವಿ ಛಾಯಾಗ್ರಾಹಕರು ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಡ್ಕಲ್ ಗ್ರಾಪಂ ಅಧ್ಯಕ್ಷೆ ವನಜಾಕ್ಷಿ ಎಸ್. ಶೆಟ್ಟಿ, ಕೊಲ್ಲೂರು ಗ್ರಾಪಂ ಅಧ್ಯಕ್ಷೆ ಶಿವರಾಮಕೃಷ್ಣ ಭಟ್, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಣಾಧಿಕಾರಿ ಕುಮಾರ್ ಪುಷ್ಕರ್, ಭದ್ರಾ ಹುಲಿ ಯೋಜನೆ ನಿರ್ದೇಶಕ ಪ್ರಭಾಕರನ್, ಡಿಎಫ್‌ಒಗಳಾದ ಉದಯ ನಾಯಕ್, ದಿನೇಶ್, ಸತೀಶ್ ಬಾಬಾ ರೈ, ಶ್ರೀಪತಿ, ಸಿದ್ದರಾಮಪ್ಪ, ಮತ್ತಿತರರು ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

ಕಾರ್ಕಳ ವನ್ಯಜೀವಿ ವಿಭಾಗದ ಡಿಎಫ್‌ಒ ಗಣಪತಿ ಸ್ವಾಗತಿಸಿದರು. ಮಲ್ಗಾರ್ ಟ್ರೋಗನ್ ಪಕ್ಷಿಯ ವಿವರವುಳ್ಳ ಪುಸ್ತಕ ಬಿಡುಗಡೆ ಮಾಡಲಾಯಿತು. ಉದಯ್ ನಾಯ್ಕ್ ನಿರೂಪಿಸಿ ಎಸಿಎಫ್‌ಒ ಸಂತೋಷ್ ವಂದಿಸಿದರು. ಜ.08ರ ವರೆಗೆ ನಡೆಯುವ ಈ ಹಕ್ಕಿ ಹಬ್ಬ ಕಾರ್ಯಕ್ರಮದಲ್ಲಿ ಸ್ಥಳೀಯ ಮತ್ತು ವಲಸೆ ಹಕ್ಕಿಗಳ ವೀಕ್ಷಣೆ, ವಿಚಾರಗೋಷ್ಠಿಗಳು ನಡೆಯಲಿದೆ.

Leave a Reply