ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ರೋಟರಿ ಕ್ಲಬ್ ವತಿಯಿಂದ ಚಿತ್ತೂರು ಸರಕಾರಿ ಪ್ರೌಢಶಾಲೆಯ ಇಂಟರಾಕ್ಟ್ ಕ್ಲಬ್ ಸಹಯೋಗದೊಂದಿಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಾಲಿನ ಪರೀಕ್ಷೆ ಎದುರಿಸುವ ಕುರಿತು ಮಾಹಿತಿ ನೀಡಲಾಯಿತು.
ಅತಿಥಿಯಾಗಿದ್ದ ಕುಮಾರ್ ಎಸ್. ಕಾಂಚನ್ ಪರೀಕ್ಷೆ ಭಯ, ಪರೀಕ್ಷೆ ಎದುರಿಸುವ ರೀತಿ, ಪರೀಕ್ಷೆಗೆ ತಯಾರಿ ಮತ್ತು ಶಿಕ್ಷಣದ ಬಗ್ಗೆ ಸುದೀರ್ಘವಾಗಿ ಮಾತನಾಡಿ ಶುಭ ಹಾರೈಸಿದರು.
ಕುಂದಾಪುರ ರೋಟರಿ ಅಧ್ಯಕ್ಷ ರೊ.ವೆಂಕಟೇಶ್ ನಾವುಂದ ಶುಭಹಾರೈಸಿದರು. ಇಂಟರಾಕ್ಟ್ ಅಧ್ಯಕ್ಷ ಶುಶಾಂತ್, ಕಾರ್ಯದರ್ಶಿ ಅಮೂಲ್ಯ, ಇಂಟರಾಕ್ಟ್ ಕೋ-ಆರ್ಡಿನೇಟರ್ ಶಿಕ್ಷಕಿ ಮೀನಾ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಜಗದೀಶ ಶೆಟ್ಟಿ ಸ್ವಾಗತಿಸಿ, ವಂದಿಸಿದರು.