ಮೀನುಗಾರಿಕೆಗೆ ಹೆಚ್ಚುವರಿಯಾಗಿ 2500 ಕೆಎಲ್ ಸೀಮೆಎಣ್ಣೆ ಬಿಡುಗಡೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ಸರ್ಕಾರಕ್ಕೆ 12,195 ಕೆ.ಎಲ್ ನೈಜ ಹಂಚಿಕೆಯಲ್ಲಿ, ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 5,472 ಕೆ.ಎಲ್ ಮಾತ್ರ ಮಂಜೂರಾಗಿತ್ತು. ಆದ್ದರಿಂದ, ಕರ್ನಾಟಕದ ಬಡ ಮೀನುಗಾರರಿಗೆ ಸಹಾಯ ಮಾಡುಲು ಉಳಿದ 6,723 ಕೆಎಲ್ಗಳನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಲು ಹಾಗೂ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನಗಳನ್ನು ನೀಡಬೇಕೆಂದು ಸಂಸದರು ಡಿಸೆಂಬರ್ 2022ರ ಚಳಿಗಾಲದ ಅಧಿವೇಶನದ ಸಮಯದಲ್ಲಿ ಮಾನ್ಯ ಕೇಂದ್ರ ಸಚಿವರಲ್ಲಿ ವಿನಂತಿಸಿದ್ದರು.

Call us

Click Here

ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 5,472 ಕೆ.ಎಲ್ ಹಿಂದಿನ ಹಂಚಿಕೆಗೆ ಹೆಚ್ಚುವರಿಯಾಗಿ 2500 ಕೆಎಲ್ ಸಬ್ಸಿಡಿ ರಹಿತ ಪಿಡಿಎಸ್ ಸೀಮೆಎಣ್ಣೆಯನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಿದ್ದಕ್ಕಾಗಿ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Leave a Reply