ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಯಡ್ತರೆ ಗುರ್ಗಿಬೆಟ್ಟು ಶ್ರೀ ಜೈನ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ಶ್ರೀ ಜೈನ ಜಟ್ಟಿಗೇಶ್ವರ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಜನವರಿ 19 ಹಾಗು 20ರಂದು ಜರುಗಲಿದೆ.
ಜ.19ರ ಗುರುವಾರ ಸಂಜೆ ದೇವತಾ ಪ್ರಾರ್ಥನೆ, ಪುಣ್ಯಾಹ, ಗೇಹ ಪ್ರತಿಗ್ರಹ, ಸ್ಥಾನಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜಾ ಬಲಿ, ಬಿಂಬ ಶುದ್ಧಿ, ಅಧಿವಾಸ ಪೂಜೆ, ಅಧಿವಾಸ ಹೋಮ, ಶ್ರೀ ದೈವಗಳ ಪ್ರತಿಷ್ಠೆ ನ್ಯಾಸಾದಿಗಳು ಜರುಗಿಲಿದೆ.
ಜ.20ರ ಶುಕ್ರವಾರ ಬೆಳಿಗ್ಗೆ ಪುಣ್ಯಹ, ಕಲಾತತ್ವ ಹೋಮ, ಬ್ರಹ್ಮಕಲಶ ಸ್ಥಾಪನೆ, ಅಧಿವಾಸ ಹೋಮ, ಕಲಶಾಭಿಷೇಕ, ಪೂಜೆ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಸಂಜೆ 6-30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ಕ್ಕೆ ಯಕ್ಷಗಾನ ಕೇಂದ್ರ ಶಿವಪ್ರಭಾ ಇಂದ್ರಾಳಿ ಉಡುಪಿ ಇವರಿಂದ ಯಕ್ಷಗಾನ ‘ಸುದರ್ಶನ ವಿಜಯ’ ಜರುಗಿದೆ.
ಈ ಎಲ್ಲಾ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಪಾಲ್ಗೊಳ್ಳುವಂತೆ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಪ್ರಕಟಣೆ ತಿಳಿಸಿದೆ.