ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ,ಜ.14: ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಮುಂಬರುವ ಪರೀಕ್ಷೆಯನ್ನು ಎದುರಿಸುವ ಕುರಿತು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ವಾಗ್ಮಿ ಮುನಿರಾಜ್ ರೆಂಜಾಳ ಅವರು ವಿದ್ಯಾರ್ಥಿಗಳಿಗೆ ಭಯವಿಲ್ಲದೆ ಪರೀಕ್ಷೆಯನ್ನು ಎದುರಿಸುವುದು ಹೇಗೆ ಎನ್ನುವುದನ್ನು ತಿಳಿಸುತ್ತಾ ಓದಿನ ಮಹತ್ವವನ್ನು ತಿಳಿಸಿದರು. ಬದುಕಿನ ಪಾಠವನ್ನು ಕಲಿಯುತ್ತಾ ಆತ್ಮವಿಶ್ವಾಸವನ್ನು ಬೆಳೆಸಿಕೊಂಡರೆ ಎಲ್ಲವೂ ಸಾಧ್ಯ ಎಂದು ಹೇಳುತ್ತಾ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಮಂಜುನಾಥ್ ಬಾಯಿರಿ, ಕುಮಾರಿ ಗೀತಾ ಉಪಸ್ಥಿತರಿದ್ದರು. ಪ್ರಭಾರ ಮುಖ್ಯೋಪಾಧ್ಯಾಯಿನಿ ವೈಶಾಲಿ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು.