ಜ.26ರಿಂದ 30ರ ತನಕ ಶ್ರೀ ಕಾಲಭೈರವ ದೇವಸ್ಥಾನದ ಅಷ್ಟಬಂಧ ಸಹಿತ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಹಳಗೇರಿ ಶ್ರೀ ಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಭೈರವ ದೇವಸ್ಥಾನದಲ್ಲಿ ಜನವರಿ 26ರಿಂದ 30ರ ತನಕ ‘ನವೀಕೃತ ಶಿಲಾದೇಗುಲ ಲೋಕಾರ್ಪಣೆ – ಪುನಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ’ ಮೊದಲಾದ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇಗುಲದ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ದಯಾನಂದ ಜೋಗಿ ನಾವುಂದ ಕೋರಿದ್ದಾರೆ.

Call us

Click Here

Watch video

ಅವರು ಬೈಂದೂರು ಪ್ರೆಸ್ ಕ್ಲಬ್ನಲ್ಲಿ ಶುಕ್ರವಾರ ಆಯೋಜಿಸಲಾದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, 5 ದಿನಗಳ ಕಾಲ ಕಂಬದಕೋಣೆ ಗ್ರಾಮದಲ್ಲಿ ನಡೆಯುವ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧೆಡೆಗಳಿಂದ ಸಾವಿರಾರು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಸಕಲ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಮಂಗಳೂರು ಕದ್ರಿ ಮಠದ ಶ್ರೀ ರಾಜಯೋಗಿ ನಿರ್ಮಲನಾಥಜೀ ಮಹಾರಾಜ್ ಹಾಗೂ ಯಡಮೊಗೆ ಹಲವರಿ ಮಠದ ಶ್ರೀ ಫೀರ್ ಯೋಗಿ ಜಗದೀಶನಾಥ್ಜಿ ಅವರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನವೀಕೃತ ಶಿಲಾದೇಗುಲ ಲೋಕಾರ್ಪಣೆ, ಪುನರ್ಪ್ರತಿಷ್ಠೆ, ಅಷ್ಠಬಂಧ ಬ್ರಹ್ಮಕಲಶೋತ್ಸವ, ಶ್ರೀ ನಾಗದೇವರಿಗೆ ಮಂಡಲೋತ್ಸವ, ಸಾಮೂಹಿಕ ಜೋಗಿ ದೀಕ್ಷಾ ಕಾರ್ಯಕ್ರಮ, ಮಹಾ ಅನ್ನಸಂತರ್ಪಣೆ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಸಂದರ್ಭ ಜರುಗಿದೆ. ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ನೀಲಾವರ ರಘುರಾಮ ಮಧ್ಯಸ್ಥರ ನೇತೃತ್ವ, ವಾಸ್ತುಶಿಲ್ಪಿ ವಿದ್ವಾನ್ ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಅವರ ವಾಸ್ತು ನಿರ್ದೇಶನ ಹಾಗೂ ಕ್ಷೇತ್ರದ ಜೋಯಿಸರಾದ ರಾಮಚಂದ್ರ ನಾವುಡ ತೆಂಕಬೆಟ್ಟು ಅವರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.

ಶ್ರೀ ಕಾಲಭೈರವ ಸೇವಾ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಟಿ. ಎಸ್. ನಾಗೇಶ್ ಜೋಗಿ ಮಾತನಾಡಿ, ನಾಥಪಂಥದ ಪರಂಪರಯ ಪ್ರಮುಖ ದೇಗುಲಗಳಲ್ಲಿ ಒಂದಾದ ಶ್ರೀ ಕಾಲಭೈರವ ದೇವಸ್ಥಾನಕ್ಕೆ 800 ವರ್ಷಗಳ ಇತಿಹಾಸವಿದ್ದು ನಾಥಪಂಥದ ಗುರುಗಳಿಂದಲೇ ಪ್ರತಿಷ್ಠಾಪಿಸಲ್ಪಟ್ಟಿದೆ. ಇದೀಗ ದೇವಸ್ಥಾನ ಜೀರ್ಣೋದ್ಧಾರಗೊಂಡು ಪುನರ್ ಪ್ರತಿಷ್ಠೆಗೆ ಸಿದ್ಧಗೊಂಡಿದೆ. ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ದಿ.26 ರಿಂದ 30ರ ತನಕ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮವು ಹಲವರಿ ಮಠದ ಪೀಠಾಧ್ಯಕ್ಷರಾದ ಶ್ರೀ ಫೀರ್ ಯೋಗಿ ಜಗದೀಶ್ನಾಥ್ಜೀ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ. ದಿ.27ರ ಬೆಳಿಗ್ಗೆ ನಾಗಮಂಗಲ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಚನ, ಕಾವೂರು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾ ಮಠದ ಶ್ರೀ ಧರ್ಮಪಾಲನನಾಥ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿ ರಾಜ್ಯದ ಗೃಹಸಚಿವರು, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರು, ಹಿಂದುಳಿದ ವರ್ಗಗಳ ಇಲಾಖಾ ಸಚಿವರು, ಉಸ್ತುವಾರಿ ಸಚಿವರು ಮೊದಲಾದ ಗಣ್ಯರ ಕಾರ್ಯಕ್ರಮ ಜರುಗಲಿದೆ. ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಂದ ಆಶೀರ್ವಚನ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಬೈಂದೂರು ಶಾಸಕರ ಮೊದಲಾದ ಗಣ್ಯಮಹನೀಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದೆ.

ಜ.28ರ ಸಂಜೆ ಕಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಚನ, ಜ.29ರಂದು ಕದ್ರಿ ಶ್ರೀ ಕ್ಷೇತ್ರ ಸುವರ್ಣ ಕದಳಿ ಯೋಗೇಶ್ವರ ಮಠದ ಪೀಠಾಧ್ಯಕ್ಷರಾದ ಶ್ರೀ ರಾಜಯೋಗಿ ನಿರ್ಮಲನಾಥಜೀ ಮಹಾರಾಜ್ ಅವರಿಂದ ಆಶೀರ್ವಚನ, ಗೌರಿಗದ್ದೆ ದತ್ತಾಶ್ರಮದ ಶ್ರೀ ವಿನಯ ಗುರೂಜಿ ಅವರಿಂದ ಶುಭಶಂಸನೆ ಜರುಗಲಿದೆ. ಜ.30ರಂದು ಶ್ರೀ ಸಿದ್ಧಪೀಠ ಕೊಡಚಾದ್ರಿ ಹಲವರಿ ಮಠ ಯಡಮೊಗೆ ಪೀಠಾಧ್ಯಕ್ಷರಾದ ಶ್ರೀ ಫೀರ್ಯೋಗಿ ಜಗದೀಶ್ನಾಥಜೀ ಅವರಿಂದ ಆಶೀರ್ವಚನ, ಕದ್ರಿ ಮಠದ ಪ್ರಧಾನ ಅರ್ಚಕರಿಂದ ಧಾರ್ಮಿಕ ಉಪನ್ಯಾಸ, ಸೊರಬ ಚಂದ್ರಗುತ್ತಿ ಮಠದ ಪೀಠಾಧ್ಯಕ್ಷರಾದ ಶ್ರೀ ಫೀರ್ಯೋಗಿ ಸುಖದೇವಾನಾಥಜೀ ಹಾಗೂ ವಿಟ್ಲದ ಯೋಗೇಶ್ವರ ಮಠದ ಪೀಠಾಧ್ಯಕ್ಷ ಫೀರ್ಯೋಗಿ ಶೃದ್ಧಾನಾಥಜೀ ಅವರ ದಿವ್ಯ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮಗಳು ಜರುಗಲಿದ್ದು, ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಜೋಗಿ ಕೆಳಾಮನೆ ಮಾತನಾಡಿ ಜ.26ರ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈವಿಧ್ಯ, ಜ.27ರಂದು ನೃತ್ಯ ಸಿಂಚನ ಹಾಗೂ ರೂಪಕಲಾ ಕುಂದಾಪುರ ತಂಡದಿಂದ ‘ಮಂಜ ಪಾಸ್ ಆದ್ನಾ’ ನಾಟಕ, ಜ.28ರ ಸಂಜೆ ಸ್ಥಳೀಯ ವಿದ್ಯಾರ್ಥಿಗಳಿಮದ ‘ನೃತ್ಯ ವೈವಿಧ’ ಹಾಗೂ ಅರೆಹೊಳೆ ಪ್ರತಿಷ್ಠಾನ ಮಂಗಳೂರು ಇದರ ಕಲಾವಿದರಿಂದ ‘ನೃತ್ಯ ವೈಭವ’ ಜರುಗಿದೆ. ಜ.29ರ ರಾತ್ರಿ ಶ್ರೀ ಗಣೇಶ್ ಯಕ್ಷಗಾನ ಮಂಡಳಿ ಉಪ್ಪಿನಕುದ್ರು ಇವರಿಂದ ‘ಗೊಂಬೆಯಾಟ’ ಹಾಗೂ ಜ30ರ ಮಧ್ಯಾಹ್ನ ಬಡಗುತಿಟ್ಟಿನ ಅತಿಥಿ ಕಲಾವಿದರ ಕುಡುವಿಕೆಯಲ್ಲಿ ’ವಿಷಯೆ ವಿವಾಹ’ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು.

Click here

Click here

Click here

Click Here

Call us

Call us

ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರಾದ ನರಸಿಂಹ ಹಳಗೇರಿ, ಸುಕೇಶ್ ಕುಮಾರ್ ಶೆಟ್ಟಿ ಹಳಗೇರಿ, ಕಾರ್ಯದರ್ಶಿ ಸುಬ್ರಹ್ಮಣ್ಯ ಜೋಗಿ ಉಪಸ್ಥಿತರಿದ್ದರು.

Leave a Reply