ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ: ಡಿಸಿ ಕೂರ್ಮಾ ರಾವ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರಿ ಯೋಜನೆಗಳ ಮಾಹಿತಿ ಹಾಗೂ ತಿಳುವಳಿಕೆ ನೀಡುವ ಉದ್ದೇಶದಿಂದ ಮಾಡುತ್ತಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಅತ್ಯಂತ ಮಹತ್ವದಾಗಿದ್ದು, ಜಿಲ್ಲೆಯಾದ್ಯಂತ ಜನಸಾಮಾನ್ಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಹೇಳಿದರು.

Call us

Click Here

ನಾಗೂರು ಶ್ರೀ ಲಲಿತ ಕೃಷ್ಣ ಕಲಾಮಂದಿರದಲ್ಲಿ ಶನಿವಾರ ನಡೆದ ಕಿರಿಮಂಜೇಶ್ವರ ಗ್ರಾಮ ವ್ಯಾಪ್ತಿಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಒಂದೇ ಸೂರಿನಡಿಯಲ್ಲಿ ತರುವ ಮೂಲಕ ಸಾರ್ವಜನಿಕರ ಆವಹಾಲುಗಳನ್ನು ಪಡೆದು ಸ್ಥಳೀಯ ಸಮಸ್ಯೆಗಳಿಗೆ ಸಾಧ್ಯವಾದಷ್ಟರ ಮಟ್ಟಿಗೆ ಪ್ರಾಮಾಣಿಕವಾಗಿ ಸ್ಥಳದಲ್ಲಿಯೇ ಪರಿಹಾರ ದೊರಕಿಸಿಕೊಡುವ ಪ್ರಯತ್ನ ಮಾಡಲಾಗುತ್ತದೆ. ಇನ್ನು ಕೆಲವು ಅರ್ಜಿಗಳು ತಾಂತ್ರಿಕ ಹಾಗೂ ಕಾನೂನಾತ್ಮಕ ತೊಡಕಿದ್ದರೆ ಅವುಗಳನ್ನು ಹಂತ ಹಂತವಾಗಿ ಮುಂದಿನ ದಿನಗಳಲ್ಲಿ ಫಾಲೋಅಪ್ ಮಾಡಿ ಇಥ್ಯರ್ತಗೊಳಿಸಲು ಪ್ರಯತ್ನಿಸಲಾಗುವುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಶಾಂತಿ ಹಾಗೂ ಸಹನೆಯಿಂದ ಸಹಕರಿಸಬೇಕು ಎಂದರು.

ವಿವಿಧ ಫಲಾನುಭವಿಗಳಿಗೆ ಸವಲತ್ತು, ಆದೇಶ ಪ್ರತ್ರವನ್ನು ವಿತರಿಸಿ ಮಾತನಾಡಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಬೈಂದೂರು ತಾಲೂಕು ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, ಹೆಚ್ಚಿನವರು ಹೈನುಗಾರಿಕೆ ಮತ್ತು ಕೃಷಿಯನ್ನು ಅವಂಭಿಸಿದ್ದಾರೆ. ಕ್ಷೇತ್ರಕ್ಕೆ ಈಗಾಗಲೇ ಸರ್ಕಾರ ಹಾಗೂ ಸಂಸದರ ಸಹಕಾರದಿಂದ ಸುಮಾರು ಮೂರುವರೆ ಸಾವಿರ ಕೋಟಿಗೂ ಮೀರಿ ಅನುದಾನ ಬಂದಿದ್ದು, ಹಳ್ಳಿಯ ಮೂಲೆಮೂಲೆಗಳಲ್ಲಿ ಮೂಲಸೌಕರ್ಯಕ್ಕೆ ಆದ್ಯತೆ ನೀಡಿ ಅಭಿವೃದ್ಧಿಪಡಿಸಲಾಗಿದೆ. ರಸ್ತೆ, ಸೇತುವೆ, ಕಿಂಡಿ ಅಣೆಕಟ್ಟುಗಳ ನಿರ್ಮಾಣ, ಕುಡಿಯುವ ನೀರು, ಬೆಳಕು, ಕೃಷಿ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಕೇಂದ್ರ ಸರ್ಕಾರವು ಮೀನುಗಾರರಿಗೆ ಹಂತಹಂತವಾಗಿ ಸೀಮೆಎಣ್ಣೆ ಬಿಡುಗಡೆಗೊಳಿಸುತ್ತಿದೆ. ಈ ಭಾಗದ ಐದು ಹಳ್ಳಿಗಳಿಗೆ ಕೃಷಿಗೆ ಸಮರ್ಪಕ ನೀರನ್ನು ಒದಗಿಸುವ ಉದ್ದೇಶದಿಂದ ಶೀಘ್ರದಲ್ಲಿ ಸುಮಾರು ೭೮ ಕೋಟಿ ವೆಚ್ಚದಲ್ಲಿ ಶ್ರೀ ಗುಡೇ ಮಹಾಲಿಂಗೇಶ್ವರ ಏತ ನೀರಾವರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು.

ಗ್ರಾಪಂ ಅಧ್ಯಕ್ಷೆ ಗೀತಾ ಸಮಾರಂಭ ಉದ್ಘಾಟಿಸಿದರು. ಕುಂದಾಪುರ ಸಹಾಯಕ ಆಯುಕ್ತ ಕೆ. ರಾಜು ಪ್ರಾಸ್ತಾವಿಸಿದರು. ಜಿಪಂ ಸಿಇಒ ಪ್ರಸನ್ನ, ತಾಪಂ ಇಒ ಭಾರತಿ ಎಸ್., ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ, ಪರೀಕ್ಷಾರ್ಥದ ಐಎಎಸ್ ಅಧಿಕಾರಿ ಯತೀಶ್, ಗ್ರಾಪಂ ಉಪಾಧ್ಯಕ್ಷ ಶೇಖರ ಖಾರ್ವಿ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ವಿಶೇಷ ಆಹ್ವಾನಿತರಾಗಿ ಅಂತರಾಷ್ಟ್ರೀಯ ಖ್ಯಾತಿಯ ಯೋಗಪಟು ಧನ್ವಿ ಮರವಂತೆ ಉಪಸ್ಥಿತರಿದ್ದರು. ಶಿಕ್ಷಕ ಸುಬ್ರಹ್ಮಣ್ಯ ಉಪ್ಪುಂದ ಕಾರ್ಯಕ್ರಮ ನಿರ್ವಹಿಸಿದರು. ಸಭೆಯಲ್ಲಿ ಹಲವಾರು ಅರ್ಜಿಗಳು ಬಂದಿದ್ದು, ಕೆಲವನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಯಿತು.

Leave a Reply