Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುವರ್ಣ ಸಂಭ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮಯ್ಯಾಡಿ
    ಊರ್ಮನೆ ಸಮಾಚಾರ

    ಸುವರ್ಣ ಸಂಭ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮಯ್ಯಾಡಿ

    Updated:24/01/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಬೈಂದೂರು: ಗುಣಮಟ್ಟದ ಶಿಕ್ಷಣದ ಮೂಲಕವೇ ಬೈಂದೂರು ಪರಿಸರದಲ್ಲಿ ಮನೆಮಾತಾದ, ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನಗೈದ ಶಾಲೆಗೀಗ 50ರ ಹರೆಯ. ಖಾವಂದರೆಂದರೆ ನಡೆದಾಡುವ ದೇವರೆಂದು ಪೂಜಿಸುವ ಮಂದಿಯ ನಡುವೆ, ಖಾವಂದರ ಆಶೀರ್ವಾದದ ಫಲವಾಗಿ ಮುನ್ನಡೆಯುತ್ತಾ ಬಂದ ಉಡುಪಿ ಜಿಲ್ಲೆಯ ಏಕೈಕ ಅನುದಾನಿತ ಶಾಲೆಯೀಗ ತನ್ನ ಇತಿಹಾಸವನ್ನು ಸುವರ್ಣಾಕ್ಷರಗಳಲ್ಲಿ ದಾಖಲಿಸುತ್ತಿದೆ. ಹೌದು. ತಾಲೂಕಿನ ಮಯ್ಯಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಗೀಗ ಸುವರ್ಣ ಸಂಭ್ರಮ.

    Click Here

    Call us

    Click Here

    ಎಸ್.ಡಿ.ಎಂ ಹಿರಿಯ ಪ್ರಾಥಮಿಕ ಶಾಲೆಯಾಗಿ ಗುರುತಿಸಿಕೊಳ್ಳುವ ಮೊದಲು ಮಯ್ಯಾಡಿಯಲ್ಲಿದ್ದುದು ನಿತ್ಯಾನಂದ ಎಡೆಡ್ ಹೈಯರ್ ಪ್ರೈಮೆರಿ ಸ್ಕೂಲ್ ಎಂಬ ಅನುದಾನಿತ ಶಾಲೆ. 1938ರಲ್ಲಿ ಶೈಕ್ಷಣಿಕ ಸೇವೆಯ ಮಹದಾಸೆಯಿಂದ ಸಮಾನ ಮನಸ್ಕರೊಡಗೂಡಿ ಆರಂಭಿಸಿದ ಶಾಲೆ ಮಯ್ಯಾಡಿಯ ಖಾಸಗಿ ಕಟ್ಟಡಗಳಲ್ಲಿಯೇ ಹತ್ತಾರು ವರ್ಷ ಮುನ್ನಡೆದಿತ್ತು. ಎಂ. ದ್ಯಾವಪ್ಪ ಶೇರುಗಾರ್ ಅವರು ಶಾಲೆಯ ಮುಖ್ಯೋಪಧ್ಯಾಯರಾಗಿದ್ದರು. ಕಾಲಕ್ರಮೇಣ ಸರಕಾರದ ನೀತಿಯಂತೆ ಅನುದಾನ ಪಡೆಯಲು ಸ್ವಂತ ಕಟ್ಟಡ ಪಡೆಯುವುದು ಅನಿವಾರ್ಯವಾದಾಗ ಆಡಳಿತ ಮಂಡಳಿಗೆ ಜಾಗ ಖರೀದಿಸಿ, ಕಟ್ಟಡ ನಿರ್ಮಿಸುವುದು ಕಷ್ಟಸಾಧ್ಯವಾಯಿತು. ಆಗ ಮಯ್ಯಾಡಿಯ ಶಿಕ್ಷಣ ಪ್ರೀಯ ಹಿರಿಯರಿಗೆ ಹೊಳೆದದ್ದೇ ಧರ್ಮಸ್ಥಳದ ಹೆಸರು. ಕುಂದಾಪ್ರ ಡಾಟ್ ಕಾಂ ವರದಿ.

    ಮಯ್ಯಾಡಿಯಿಂದ ನಿಯೋಗವೊಂದು ಧರ್ಮಸ್ಥಳಕ್ಕೆ ತೆರಳಿ ಖಾವಂದರನ್ನು ಭೇಟಿ ಮಾಡಿತು. ಮಂಜುನಾಥ ಸ್ವಾಮಿಯ ಕೃಪೆಯಿಂದಾಗಿ ಖಾವಂದರೂ ಶಾಲೆಯನ್ನು ಮುನ್ನಡೆಸಲು ಅಸ್ತು ಎಂದರು. 1973ರಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನಲ್ ಸೊಸೈಟಿ ಸುಪರ್ಧಿಗೆ ಶಾಲೆ ಸೇರಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಎಂದು ಮರುನಾಮಕರಣಗೊಂಡು ಸ್ವಂತ ಕಟ್ಟಡದಲ್ಲಿ ತಲೆಯೆತ್ತಿದ ಶಾಲೆ, ಶಿಕ್ಷಣ ರಂಗದಲ್ಲಿ ಕೀರ್ತೀ ಪತಾಕೆಯನ್ನು ಹಾರಿಸುತ್ತಲೇ ಮುನ್ನಡೆಯಿತು.

    ಬೈಂದೂರು ತಾಲೂಕಿನಲ್ಲಿ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ದ ಶಾಲೆ ಹಲವು ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಬೇರುಗಳನ್ನು ಗಟ್ಟಿಗೊಳಿಸಲು ಮಹತ್ತರವಾದ ಪಾತ್ರವಹಿಸಿದೆ. 1985ರಲ್ಲಿ 13 ಮಂದಿ ಅನುದಾನಿತ ಶಿಕ್ಷಕರು ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮುಂದೆ ಅನುದಾನಿತ ಶಿಕ್ಷಕರ ನೇಮಕಾತಿ ನಿಂತಾಗಲೂ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯೇ ನೇರವಾಗಿ ಶಿಕ್ಷಕರನ್ನು ನೇಮಕಾತಿ ಮಾಡಿ ಗುಣಮಟ್ಟದ ಶಿಕ್ಷಣವನ್ನು ಮುಂದುವರಿಸುತ್ತಾ ಬರುತ್ತಿದೆ.

    2000 ಇಸವಿಯ ಸುಮಾರಿಗೆ ಆಂಗ್ಲ ಮಾಧ್ಯಮ ಪ್ರಭಾವ, ಫೀಡಿಂಗ್ ಶಾಲೆಗಳು ಮೇಲ್ದರ್ಗೆಜೇರಿದ ಪರಿಣಾಮದಿಂದಾಗಿ ಮಕ್ಕಳ ಸಂಖ್ಯೆ ಕ್ಷೀಣಿಸತೊಡಗಿತ್ತು. 2009ರ ಹೊತ್ತಿಗೆ ಬದಲಾದ ಕಾಲಮಾನಕ್ಕೆ ತಕ್ಕಂತೆ ಅಪ್ಡೇಟ್ ಆದ ಶಾಲಾ ಆಡಳಿತ ಮಂಡಳಿಯ ದೂರದ ಮಕ್ಕಳನ್ನು ಆಟೋ ರಿಕ್ಷಾದ ಮೂಲಕ ಕರೆತರುವ ಯೋಜನೆ ಹಾಕಿಕೊಂಡಿತು. ಮುಂದೆ ಮಕ್ಕಳ ಸಂಖ್ಯೆ ಹೆಚ್ಚಾದಾಗ 2011ರಲ್ಲಿ ಧರ್ಮಸ್ಥಳದಿಂದಲೇ ವಾಹನವೊಂದು ಶಾಲೆಗೆ ಬಂತು. ಅಂದು ಶಿಕ್ಷಕರಾಗಿದ್ದ ರಾಜು ಎಸ್. ಅವರೇ ಸ್ವತಃ ವಾಹನ ಚಲಾಯಿಸಿ ಮಕ್ಕಳನ್ನು ಪ್ರತಿನಿತ್ಯ ಶಾಲೆಗೆ ಕರೆತರಲು ಮುಂದಾದರು. ಮುಂದೆ ಅವರು ಮುಖ್ಯೋಪಧ್ಯಾಯರಾದ ಬಳಿಕವೂ ಅದು ಮುಂದುವರಿದಿದೆ. ಇದೀಗ ಶಾಲೆಯಲ್ಲಿ ಮೂರು ಶಾಲಾ ವಾಹನವಿದ್ದು, ಅದಕ್ಕಾಗಿ ಓರ್ವ ಚಾಲಕನನ್ನು ನೇಮಿಸಿಕೊಳ್ಳಲಾಗಿದೆ.

    Click here

    Click here

    Click here

    Call us

    Call us

    ಶಾಲಾ ವಾಹನದೊಂದಿಗೆ, ಆಂಗ್ಲ ಮಾಧ್ಯಮ ಶಿಕ್ಷಣವನ್ನು ಆರಂಭಿಸಿದ ಪರಿಣಾಮವಾಗಿ ಪ್ರಸಕ್ತ ವರ್ಷದಲ್ಲಿ 522 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಬೈಂದೂರು ವಲಯದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಶಾಲೆಯಾಗಿ ಗುರುತಿಸಿಕೊಂಡಿದೆ. ಪ್ರಸ್ತುತ 15 ಮಂದಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದು, ಈ ಪೈಕಿ ಮುಖ್ಯೋಪಧ್ಯಾಯರಾದ ರಾಜು ಎಸ್. ಅವರು ಅನುದಾನಿತ ಶಿಕ್ಷಕರಾಗಿದ್ದಾರೆ. ಉಳಿದ 14 ಮಂದಿಯನ್ನು ಧರ್ಮಸ್ಥಳದ ಟ್ರಸ್ಟ್ ವತಿಯಿಂದ ನೇಮಿಸಿಕೊಳ್ಳಲಾಗಿದೆ. ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಿಕ್ಷಣ, ಕಂಪ್ಯೂಟರ್ ಶಿಕ್ಷಣದೊಂದಿಗೆ ಸೆಲ್ಕೊ ಡಿಜಿಟಲ್ ಕ್ಲಾಸ್, ವಾಚನಾಲಯ, ಮಧ್ಯಾಹ್ನದ ಬಿಸಿಯೂಟಕ್ಕಾಗಿ ಅನ್ನಬ್ರಹ್ಮ ಸಭಾಂಗಣ, ಸುಸಜ್ಜಿತ ಶೌಚಾಲಯ ಹೊಂದಿದೆ.

    ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನಲ್ ಸೊಸೈಟಿಯು ಶಾಲಾ ಮೂಲ ಸೌಕರ್ಯ, ಶಿಕ್ಷಕರ ವೇತನ, ನೋಟ್ ಪುಸ್ತಕ ಹಾಗೂ ಇನ್ನಿತರ ನಿರ್ವಹಣಾ ವೆಚ್ಚ ಸೇರಿದಂತೆ ಪ್ರತಿ ವರ್ಷ 25 ಲಕ್ಷಕ್ಕೂ ಅಧಿಕ ಹಣವನ್ನು ಮಯ್ಯಾಡಿಯ ಶಾಲೆಗಾಗಿ ವಿನಿಯೋಗಿಸುತ್ತಿದೆ. ಟ್ರಸ್ಟ್ ವತಿಯಿಂದಲೇ ವಾಹನ, ನಿರ್ವಹಣಾ ವೆಚ್ಚ, ಹೊಸ ಪಿಠೋಪಕರಣಗಳು ಮೊದಲಾದವುಗಳು ಬರುತ್ತಿದ್ದರೆ ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಒಂದಿಷ್ಟು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ಸರಕಾರ ಬಿಸಿಯೂಟ ಆರಂಭಿಸುವ ಮೊದಲೇ ಉಡುಪಿ ಮಠದಿಂದ ನೇತೃತ್ವದಲ್ಲಿ ಬಿಸಿಯೂಟ ದೊರೆಯುತ್ತಿದ್ದರೆ, ಸರಕಾರದ ಬಿಸಿಯೂಟ ಆರಂಭವಾದ ಬಳಿಕ ಮಠದ ಮಧ್ಯಸ್ಥಿಕೆಯಲ್ಲಿ ಬಿಸಿಯೂಟ ಯೋಜನೆ ಮುನ್ನಡೆದಿತ್ತು. ಕಳೆದೆರಡು ವರ್ಷದಿಂದ ನೇರವಾಗಿ ಸರಕಾರದಿಂದ ಬಿಸಿಯೂಟದ ಸೌಲಭ್ಯ ಶಾಲೆಗೆ ನೀಡಲಾಗುತ್ತಿದೆ.

    ಶಾಲೆಯಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ ಶಿಕ್ಷಕರುಗಳಾದ ರಾಮ ದೇವಾಡಿಗ, ಕುಪ್ಪಯ್ಯ ದೇವಾಡಿಗ, ರಮಾಬಾಯಿ, ನಾಗಪ್ಪ ಶೇರುಗಾರ್, ರವಿಕಲಾ, ಸದಾಶಿವ ಎಸ್., ರಘುನಾಥ ಶೆಟ್ಟಿ, ಜಗನ್ನಾಥ ಶೆಟ್ಟಿ, ರಾಮ ನಾಯ್ಕ್, ತಿಮ್ಮಪ್ಪ ಪೂಜಾರಿ, ಕೆ. ಜಯಶೀಲ ಶೆಟ್ಟಿ, ಡಿ. ನಾರಾಯಣ ಶೇರುಗಾರ್, ಡಿ. ಬಾಲಕೃಷ್ಣ ರಾವ್, ಎಸ್. ಸದಾಶಿವ ಸೂರಾಲ್. ಬಿ. ಸೋಮಶೇಖರ ಶೆಟ್ಟಿ, ಬಿ.ಎನ್. ವೇದಾವತಿ, ಎಂ. ಸದಾನಂದ, ತಿಮ್ಮಪ್ಪ ಗೌಡ, ಡಿ. ಕೃಷ್ಣಪ್ಪ ಪೂಜಾರಿ, ಜಿ. ಹನುಮಂತ, ಬಿ. ಸಾವಿತ್ರಿ, ಜಯಭಾರತಿ, ಕೆ. ರಾಮಣ್ಣ ನಾಯ್ಕ್, ಕೆ. ಗಣಪತಿ, ಅಮಿತಾನಂದ ಹೆಗ್ಡೆ ಮೊದಲಾದವರುಗಳನ್ನು ವಿದ್ಯಾರ್ಥಿಗಳು ಈಗಲೇ ನೆನೆಯುತ್ತಾರೆ. ಕುಂದಾಪ್ರ ಡಾಟ್ ಕಾಂ ವರದಿ.

    ಜನವರಿ 27, 28ರಂದು ಸುವರ್ಣ ಮಹೋತ್ಸವ ಸಂಭ್ರಮ:
    ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಮಯ್ಯಾಡಿ ಶಾಲೆ ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಜ.27ರ ಶುಕ್ರವಾರ ಬೆಳಿಗ್ಗೆ ಗಂಟೆ 9ಕ್ಕೆ ಧ್ವಜಾರೋಹಣ ಮತ್ತು ಬಹುಮಾನ ವಿತರಣಾ ಸಮಾರಂಭ, ಮಧ್ಯಾಹ್ನ ಗಂಟೆ 3ಕ್ಕೆ ಪುರ ಮೆರವಣಿಗೆಯೊಂದಿಗೆ ಖಾವಂದರು ಹಾಗೂ ಅತಿಥಿಗಳ ಭವ್ಯ ಸ್ವಾಗತ, ಮಧ್ಯಾಹ್ನ ಗಂಟೆ 3-30ರಿಂದ ಶಾಲೆಯಲ್ಲಿ ಸುವರ್ಣ ಸಂಭ್ರಮದ ಉದ್ಘಾಟನಾ ಸಮಾರಂಭ ಜರುಗಲಿದೆ. ಅಂದು ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅನ್ನ ಬ್ರಹ್ಮ ಸಭಾಭವನ ಉದ್ಘಾಟನೆ ಹಾಗೂ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್, ಹಿಂದುಳಿದ ವರ್ಗಗಳ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಂಸದರಾದ ಬಿ.ವೈ. ರಾಘವೇಂದ್ರ, ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ, ಮಾಜಿ ಶಾಸಕರುಗಳಾದ ಕೆ. ಲಕ್ಷ್ಮೀನಾರಾಯಣ, ಕೆ. ಗೋಪಾಲ ಪೂಜಾರಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮವಾಗಿ, ಕಿರು ಪ್ರಹಸನ, ನೃತ್ಯ ವೈಭವ ಹಾಗೂ ಯಕ್ಷಗಾನ ಪ್ರದರ್ಶನ ನಡೆಯಲಿದೆ.

    ಜ.28ರ ಶನಿವಾರ ಬೆಳಿಗ್ಗೆ ಗಂಟೆ 8-30ಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಮತ್ತು ಭಜನಾ ಪರಿಷತ್ ಗೋಳಿಹೊಳೆ ವಲಯದಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ ಗಂಟೆ 11ಕ್ಕೆ ಗುರುವಂದನಾ ಕಾರ್ಯಕ್ರಮ ನಡೆಯಲಿದ್ದು, ಈ ಹಿಂದೆ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರಿಗೆ ಗುರುವಂದನೆ ಹಾಗೂ ಗುರುಗಳೊಂದಿಗೆ ಸಂವಾದ ನಡೆಯಲಿದೆ. ಸಂಜೆ ಗಂಟೆ 4ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ಅಧ್ಯಕ್ಷ ಬಿ. ರಾಮಕೃಷ್ಣ ಶೇರುಗಾರ್ ಅವರು ವಹಿಸಲಿದ್ದು, ಮಂಗಳೂರು ರಾಮಕೃಷ್ಣ ಪದವಿ ಕಾಲೇಜಿನ ಪ್ರಾಂಶುಪಾಲರಾದ ಎಂ. ಬಾಲಕೃಷ್ಣ ಶೆಟ್ಟಿ ನಿಯೋಜಿತ ಭಾಷಣ ಮಾಡಲಿದ್ದಾರೆ. ಮಂಗಳೂರು ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರವಾಚಕ ಎಚ್. ದಿವಾಕರ ಶೆಎಟ್ಟಿ ಶುಭಾಶಂಸನೆಗೈಯಲಿದ್ದು, ವಿವಿಧ ಅತಿಥಿ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ, ಕಿರು ಪ್ರಹಸನ ಪ್ರದರ್ಶನ, ಹಿರಿಯ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಜರುಗಲಿದೆ.

    ಇದನ್ನೂ ಓದಿ: ಮಯ್ಯಾಡಿ ಶಾಲೆಯಲ್ಲಿ ಶಿಕ್ಷಕರೇ ಶಾಲಾ ವಾಹನದ ಚಾಲಕ – https://kundapraa.com/?p=29268 .

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.