ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜ.25:
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿ, ಶೇ. 70 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3 ಬಿ ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಅರ್ಜಿ ಸಲ್ಲಿಸಲು ಫೆಬ್ರವರಿ 8 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in, ದೂ.ಸಂಖ್ಯೆ: 0820-2574881, 2573881 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply