ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಬಂದರು ಹಿತ್ಲುಗದ್ದೆ ಮನೆ ಶ್ರೀ ಪಂಜುರ್ಲಿ ದೈವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯೋತ್ಸವ ಹಾಗೂ ಮಾರಿಜಾತ್ರೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.
ಸೋಮವಾರ ಗುರುಪೂಜೆ, ಕಲಾತತ್ವಹೋಮ, ೧೦೮ ಕಲಶ ಸ್ಥಾಪನೆ, ಅಧಿವಾಸ ಹೋಮ, ಮಹಾಪೂಜೆ, ಸ್ವಾಮಿ ಮತ್ತು ಬೊಬ್ಬರ್ಯ ದೈವಸ್ಥಾನದಲ್ಲಿ ನವಕ ಪ್ರಧಾನ ಕಲಾತತ್ವ ಹೋಮ, ಕಲಶಾಭಿಷೇಕ, ಮಹಾಪೂಜೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಮಂಗಳವಾರ ಶ್ರೀ ನಾಗ ದೇವರಿಗೆ ಆಶ್ಲೇಷಬಲಿ, ಕಲಾತತ್ವಹೋಮ, ಪಂಚವಿಂಶತಿ ಕಲಶ ಸ್ಥಾಪನೆ, ಕಲಶಾಭಿಷೇಕ, ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ಮಾರಿಜಾತ್ರೆ, ತುಲಾಭಾರ ಸೇವೆ ಹಾಗೂ ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು. ದೈವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.