ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದ ಪ್ರಯುಕ್ತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ನಿರ್ದೇಶನದಂತೆ ದೇಶದ ಎಲ್ಲಾ ಕಾಂಗ್ರೆಸ್ ಕಛೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ವಂಡ್ಸೆ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಉದಯ ಜಿ.ಪೂಜಾರಿ, ಶ್ರೀನಿವಾಸ ಪೂಜಾರಿ ಕಲ್ಮಡಿ, ರತ್ನಾಕರ ಶೆಟ್ಟಿ, ಗೋವರ್ಧನ್ ಜೋಗಿ, ಚಂದ್ರ ರಾಯಪ್ಪನಡಿ, ಕೊರಗು ಬಿಲ್ಲವ, ರೋಶನ್ ಕುಮಾರ್ ಶೆಟ್ಟಿ, ನಾಗರಾಜ ಪೂಜಾರಿ, ಸಂಪತ್ ಶೆಟ್ಟಿ, ಶೇಷ ಪೂಜಾರಿ ಉಪಸ್ಥಿತರಿದ್ದರು.