ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಅಸೋಸಿಯೇಷನ್, ಶಿವಮೊಗ್ಗದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ತಾಲೂಕಿನ ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿ ನಾಗರಾಜ ಖಾರ್ವಿ ಮತ್ತು ಕೃಪಾ ದಂಪತಿ ಚಿನ್ನದ ಪದಕದೊಂದಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಪದವೀಧರ ಪ್ರಾಥಮಿಕ ಶಿಕ್ಷಕ ನಾಗರಾಜ ಖಾರ್ವಿ 50 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ, 200 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ, 4×50 ಮೀ. ಫ್ರೀ ಸ್ಟೈಲ್ ರಿಲೇ ಚಿನ್ನದ ಪದಕ ಪಡೆದಿದ್ದಾರೆ. ಅವರ ಪತ್ನಿ, ಶಿಕ್ಷಕಿ ಕೃಪಾ ಖಾರ್ವಿ 50 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ, 200 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ 4×50 ಮೀ. ಮೆಡ್ಲೆ ರೀಲೆಯಲ್ಲಿ ಬೆಳ್ಳಿಪದಕ ಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
2020ರಲ್ಲಿ ನಾಗರಾಜ ಖಾರ್ವಿಯವರು ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಬಿಗಿದು, ಬೀಗ ಜಡಿದು ಈಜಿದ್ದು, ಈ ಭಂಗಿಯಲ್ಲಿ ಅತ್ಯಂತ ವೇಗವಾಗಿ ಈಜಿದ ವಿಶ್ವ ದಾಖಲೆಯನ್ನು ಹೊಂದಿದ್ದಾರೆ. ಇಬ್ಬರಿಗೆ ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ಪೆಕ್ಟರ್ ಬಿ.ಕೆ.ನಾಯ್ಕ್ ಅವರು ತರಬೇತಿ ನೀಡಿರುತ್ತಾರೆ.