ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ (Dadasaheb Phalke Internatinal film Award) ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ.
ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್‌ಗೆ ಈ ಪ್ರಶಸ್ತಿ ಲಭ್ಯವಾಗಿದೆ. ಫೆ.20ರಂದು ಮುಂಬೈನ ತಾಜ್ ಲ್ಯಾಂಡ್ ಎಂಡ್ ಹೋಟೆಲ್‌ನಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ’ (Kantara Film) ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ದೇಶಾದ್ಯಂತ ಕೋಟಿ ಕೋಟಿ ಕಲೆಕ್ಷನ್ ಹೊಸ ದಾಖಲೆಯನ್ನೇ ಬರೆದಿದೆ. ಹೀಗಿರುವಾಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇದೀಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ ತಮ್ಮದಾಗಿಸಿಕೊಂಡಿದ್ದಾರೆ. ಕಾಂತಾರ ಪ್ರಿಕ್ವೆಲ್‌ಗೆ ಸದ್ಯ ಸಿದ್ಧತೆ ನಡೆಸುತ್ತಿದ್ದಾರೆ.