ಉಳ್ತೂರು: ಕಾಲು ಜಾರಿ ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ನೀರೆತ್ತುವಾಗ ಕಾಲು ಜಾರಿ ಬಾವಿಗೆ ಬಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕ್ಷಿಪ್ರ ಕಾರ್ಯಚರಣೆ ನಡೆಸಿ ರಕ್ಷಿಸಿದ ಘಟನೆ ಶುಕ್ರವಾರ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ತೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ನಡೆದಿದೆ.

Call us

Click Here

ಉಳ್ತೂರು ನಿವಾಸಿ ರತ್ನಾವತಿ ಶೆಟ್ಟಿ (52) ಎಂಬುವವರು ಬೆಳಿಗ್ಗೆ ಬಾವಿಯಿಂದ ನೀರೆತ್ತುವಾಗ ಆಕಸ್ಮಿಕ ಕಾಲು ಜಾರಿ 20 ಅಡಿ ಆಳದ ಬಾವಿಗೆ ಬಿದ್ದರು. ತಕ್ಷಣ ಮನೆಯವರು ಅಗ್ನಿ ಶಾಮಕ ದಳದವರಿಗೆ ತಿಳಿಸಿದ್ದು, ಅಗ್ನಿ ಶಾಮಕದಳದ ಸಿಬ್ಬಂದಿ ನಾಗರಾಜ್ ಪೂಜಾರಿ ಅವರು ಬಾವಿಗೆ ಇಳಿದು ಮಹಿಳೆಯನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಾವಿಯಲ್ಲಿ ಸಾಕಷ್ಟು ನೀರಿದ್ದುದರಿಂದ ಮಹಿಳೆಗೆ ಪೆಟ್ಟಾಗಿಲ್ಲ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಮಹಿಳೆ ಪ್ರಾಣಪಾಯದಿಂದ ಪಾರಾಗಿದ್ದಾರೆ.

Leave a Reply