ಕುಂದಾಪುರ – ಬೈಂದೂರು ತಾಲೂಕಿನ ವಿವಿಧ ದೇಗುಲಗಳಲ್ಲಿ ಮಹಾಶಿವರಾತ್ರಿ ವಿಶೇಷ ಪೂಜೆ, ಶಿವನಾಮ ಸ್ಮರಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ವಿವಿಧ ಶಿವ ದೇವಾಲಯಗಳಲ್ಲಿ ಮಹಾಶಿವರಾತ್ರಿ ಆಚರಣೆಗೆ ಭಕ್ತಿ ಭಾವದಿಂದ ನಡೆಯಿತು. ಸಹಸ್ರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಭಕ್ತಿಪೂರ್ವಕವಾಗಿ ಶ್ರೀ ದೇವರಿಗೆ ನವಿಸಿ ಶಿವಸ್ತುತಿ, ಶಿವನಾಮ ಪಾರಾಯಣದಿಂದ ಪುನಿತರಾದರು. ಶಿವರಾತ್ರಿ ಉಪವಾಸವನ್ನು ಕೈಗೊಂಡು ಕೃತಾರ್ಥರಾದರು.

Call us

Click Here

ಕುಂದಾಪುರ ತಾಲೂಕಿನ ಪಂಚ ಶಂಕರನಾರಾಯಣ ಕ್ಷೇತ್ರಗಳಾದ ಕ್ರೋಢ ಶ್ರೀ ಶಂಕರನಾರಾಯಣ, ಸಿದ್ದಾಪುರ ಸಮೀಪದ ಹೊಳೆ ಶಂಕರನಾರಾಯ, ಅಮಾಸೆಬೈಲು ಸಮೀಪದ ಮಾಂಡವಿ ಶಂಕರನಾರಾಯಣ, ಬೆಳ್ವೆ ಗ್ರಾಮದ ಬೆಳ್ವೆ ಶಂಕರನಾರಾಯಣ, ಅವರ್ಸೆ ಗ್ರಾಮದ ಆವರ್ಸೆ ಶಂಕರನಾರಾಯಣ. ಕೋಟೇಶ್ವರ ಕೋಟಿಲಿಂಗೇಶ್ವರ ದೇಗುಲ, ಕುಂದಾಪುರ ಕುಂದೇಶ್ವರ ದೇವಸ್ಥಾನ, ಕೆದೂರು ಮಹಾಲಿಂಗೇಶ್ವರ ದೇವಸ್ಥಾನ, ಬೇಳೂರು ದೇಲಟ್ಟು ಮಹಾಲಿಂಗೇಶ್ವರ ದೇವಸ್ಥಾನ, ಬೇಳೂರು ಮಹಾಲಿಂಗೇಶ್ವರ ದೇವಸ್ಥಾನ, ಕುಂದಾಪುರ ಮೈಲಾರೇಶ್ವರ ದೇವಸ್ಥಾನ, ಮರಾತೂರು ಮಹಾಲಿಂಗೇಶ್ವರ ದೇವಸ್ಥಾನ, ಯಡಾಡಿ ಮಹಾಲಿಂಗೇಶ್ವರ ದೇವಸ್ಥಾನ, ಶಾನಾಡಿ ಬೆಳಗೋಡು ಮಹಾಲಿಂಗೇಶ್ವರ ದೇವಸ್ಥಾನ, ಉಳ್ತೂರುಮಹಾಲಿಂಗೇಶ್ವರ ದೇವಸ್ಥಾನ, ಕುಂಭಾಸಿ ಮಹಾಲಿಂಗೇಶ್ವರ ದೇಗುಲ, ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನ, ತಲ್ಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯ, ಮೂಡುಗಲ್ಲು ಶ್ರೀ ಕೇಶವನಾಥ ದೇವಾಲಯ, ಹಿಲ್ಕೋಡು ಶ್ರೀ ಮಹಾಲಿಂಗೇಶ್ವರ ದೇವಾಲಯ, , ಗುಜ್ಜಾಡಿಯ ಗುಹೇಶ್ವರ ದೇವಾಲಯ, ಗಂಗೊಳ್ಳಿಯ ಶ್ರೀ ವೀಅರಶೈವ ದೇವಸ್ಥಾನ, ಶ್ರೀ ಇಂದುಧರ ದೇವಾಲಯ, ನಾಯಕವಾಡಿಯ ಶ್ರೀ ಸಂಗಮೇಶ್ವರ ದೇಗುಲಗಳಲ್ಲಿ ಶಿವನಾಮ ಸ್ಮರಣೆ, ಪೂಜೆ, ಭಜನೆ ನಡೆದವು.

ಬೈಂದೂರು ತಾಲೂಕಿನ ಬೈಂದೂರು ಸೇನೇಶ್ವರ ದೇವಸ್ಥಾನ, ಕಿರಿಮಂಜೇಶ್ವರ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನ, ವನಕೊಡ್ಲು ಮಹಾಲಿಂಗೇಶ್ವರ ದೇವಸ್ಥಾನ, ಪಡುವರಿಯ ಶ್ರೀ ಸೋಮೇಶ್ವರ ದೇವಾಲಯ, ಉಪ್ಪುಂದ ಶ್ರೀ ಅರಮಕೋಡಿ ದೇವಸ್ಥಾನ, ಹೆರಂಜಾಲಿನ ಶ್ರೀ ಗುಡೆಮಹಾಲಿಂಗೇಶ್ವರ ದೇವಾಲಯ, ಮರವಂತೆ ಶ್ರೀ ಗಂಗಾಧರೇಶ್ವರ ದೇವಾಲಯ, ತಗ್ಗರ್ಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಳವಾಡಿ ಶ್ರೀ ಈಶ್ವರ ಮಾರಿಕಾಂಬಾ ದೇವಸ್ಥಾನ ಸೇರಿದಂತೆ ವಿವಿಧ ದೇಗುಲಗಳಲ್ಲಿ ಶಿವನಾಮ ಸ್ಮರಣೆ, ಪೂಜೆ, ಭಜನೆ ನಡೆದವು.

Leave a Reply